ವಿಧಾನ ಪರಿಷತ್ ಮಾಜಿ ಸದಸ್ಯ ಬಿಜೆಪಿ ಮುಖಂಡ ಕೆ.ಬಿ.ಶಾಣಪ್ಪ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು ಶೀಘ್ರದಲ್ಲಿ ಕಾಂಗ್ರೆಸ್ ಸೇರುವುದಾಗಿ ತಿಳಿಸಿದ್ದಾರೆ. ಉಮೇಶ್ ಜಾಧವ್ ಅವರನ್ನ ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಪಕ್ಷದ ಹಿರಿಯರು ಸ್ಥಳೀಯ ನಾಯಕರನ್ನು ಕಡೆಗಣಿಸಿದ್ದಾರೆ. ಸ್ಥಳೀಯರನ್ನು ಸಂಪರ್ಕಿಸದೆ ಜಾಧವ್ ಅವರನ್ನು ಖರ್ಗೆ ವಿರುದ್ಧ ಕಣಕ್ಕಿಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಶೀಘ್ರದಲ್ಲಿ ತಾವು ಕಾಂಗ್ರೆಸ್ ಸೇರಲಿದ್ದು, ಏ.23 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಮಲ್ಲಿಕಾರ್ಜುನ ಖರ್ಗೆಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
