Sunday, May 16, 2021
Homeಜಿಲ್ಲೆಹಾಸನಕೈ ಬಿಟ್ಟು ಕಮಲ ಹಿಡಿದ ಎ. ಮಂಜು – ಹಾಸನದಲ್ಲಿ ಪ್ರಜ್ವಲ್ ಹಾದಿ ಕಠಿಣ

ಇದೀಗ ಬಂದ ಸುದ್ದಿ

ಕೈ ಬಿಟ್ಟು ಕಮಲ ಹಿಡಿದ ಎ. ಮಂಜು – ಹಾಸನದಲ್ಲಿ ಪ್ರಜ್ವಲ್ ಹಾದಿ ಕಠಿಣ

ಹಾಸನ ಲೋಕಸಭಾ ಅಖಾಡದಲ್ಲಿನ ರಾಜಕೀಯ ಬೆಳವಣಿಗೆಗಳು ಈಗ ಸಂಚಲನ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ಕಣಕ್ಕಿಳಿದಿದ್ದು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ದೇವೇಗೌಡ ಕುಟುಂಬದ ವಿರುದ್ಧ ತೊಡೆ ತಟ್ಟಿರೋ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದಾರೆ. ಪ್ರಜ್ವಲ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಮಾಜಿ ಸಚಿವ ಎ.ಮಂಜು ಜಿಲ್ಲೆಯ ಪ್ರಮುಖ ಕಾಂಗ್ರೆಸ್ ಮುಖಂಡರಲ್ಲಿ ಒಬ್ಬರು. ಈ ಹಿಂದೆಯೂ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಎದುರು ಸ್ಪರ್ಧೆ ಮಾಡಿ ಸರಿ ಸುಮಾರು 1.6 ಲಕ್ಷ ಮತಗಳ ಅಂತರದಿಂದ ಪರಾಭವಗೊಂಡಿದ್ರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಅವರು, ಮರಳಿ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸುತ್ತಿದ್ದಾರೆ. 1999 ರಲ್ಲಿ ಮೊದಲ ಬಾರಿಗೆ ಮಂಜು ಬಿಜೆಪಿಯಿಂದಲೇ ವಿಧಾನಸಭೆ ಪ್ರವೇಶಿಸಿದ್ದರು. ನಂತರ ಎಸ್.ಎಂ.ಕೃಷ್ಣ ಮಂಜು ಅವರನ್ನು ಕಾಂಗ್ರೆಸ್‍ಗೆ ಸೆಳೆದಿದ್ದರು.

ಹಾಸನ ಲೋಕಸಭಾ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಹಾಸನ ಜಿಲ್ಲೆಯ ಹೊಳೆನರಸೀಪುರ, ಸಕಲೇಶಪುರ, ಬೇಲೂರು, ಅರಸೀಕೆರೆ, ಚನ್ನರಾಯಪಟ್ಟಣ, ಅರಕಲಗೂಡು ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ. ಪ್ರಜ್ವಲ್ ಯುವನಾಯಕನಾಗಿ ಮತದಾರರನ್ನ ಸೆಳೆದರೆ, ಮಂಜುವಿಗೆ ರಾಜಕೀಯ ಅನುಭವವೇ ವರದಾನವಾಗಲಿದೆ.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img