Wednesday, September 22, 2021
Homeರಾಜಕೀಯಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಕಣಕ್ಕೆ– ಯಶ್, ದರ್ಶನ್ ಬೆಂಬಲ

ಇದೀಗ ಬಂದ ಸುದ್ದಿ

ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಕಣಕ್ಕೆ– ಯಶ್, ದರ್ಶನ್ ಬೆಂಬಲ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಟಿ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಯಾಗಿ ಈಗಾಗಲೇ ನಿಖಿಲ್ ಕುಮಾರಸ್ವಾಮಿ ಅಖಾಡದಲ್ಲಿದ್ದಾರೆ. ಬುಧವಾರ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಸುಮಲತಾಗೆ ನಟರಾದ ಯಶ್​, ದರ್ಶನ್​, ದೊಡ್ಡಣ್ಣ, ನಿರ್ಮಾಪಕ ರಾಕ್​​ಲೈನ್​ ವೆಂಕಟೇಶ್​ ಸೇರಿದಂತೆ ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಗಳು ಬೆಂಬಲ ಸೂಚಿಸಿದ್ದಾರೆ.   

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಮಲತಾ, ಅಂಬರೀಷ್‌  ನಿಧನ ಹೊಂದಿದ ಸಂದರ್ಭದಲ್ಲಿ ನಾನು ಕತ್ತಲೆಯ ಮನಸ್ಥಿತಿಯಲ್ಲಿದ್ದೆ ಎಂದು ಹೇಳಿದ್ರು. ನಮಗೆ ಈಗ  ನೆಮ್ಮದಿಯ ಜೀವನ ಸಾಗಿಸಲು ಯಾವ ಕೊರತೆಯೂ ಇಲ್ಲ. ಅಂಬರೀಷ್‌ ಬಿಟ್ಟುಹೋದ ಕನಸುಗಳನ್ನು ನೀವು ಈಡೇರಿಸಬೇಕು ಎನ್ನುವುದು ಅಭಿಮಾನಿಗಳ ಒತ್ತಾಸೆಯಾಗಿದೆ.. ಜನರ ಒತ್ತಾಸೆಗೆ ನಾನು ಬೆಂಬಲ ನೀಡಲಿಲ್ಲ ಎಂದಾದರೆ ನಾನು ಅಂಬರೀಷ್‌ ಅವರ ಪತ್ನಿಯಾಗಿದ್ದು ಏನು ಪ್ರಯೋಜನ ಎಂದು ಪ್ರಶ್ನಿಸಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img