Saturday, September 18, 2021
Homeರಾಜಕೀಯಮೊದಲ ಹಂತದ ಲೋಕಸಭಾ ಚುನಾವಣೆ- ಇಂದಿನಿಂದ ನಾಮಪತ್ರ ಸಲ್ಲಿಕೆ

ಇದೀಗ ಬಂದ ಸುದ್ದಿ

ಮೊದಲ ಹಂತದ ಲೋಕಸಭಾ ಚುನಾವಣೆ- ಇಂದಿನಿಂದ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮಾ.26 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾ.27ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾ.29 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್​​​ 18ರಂದು ಒಟ್ಟು 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಉಡುಪಿ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮತದಾ‌ನ ನಡೆಯಲಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img