Sunday, May 16, 2021
Homeರಾಜಕೀಯಕಾಂಗ್ರೆಸ್ ಇಲ್ಲವೇ ಜೆಡಿಎಸ್ ನಿಂದ ಸ್ಪರ್ಧಿಸಲು ಸಿದ್ಧ - ಪ್ರಮೋದ್ ಮಧ್ವರಾಜ್

ಇದೀಗ ಬಂದ ಸುದ್ದಿ

ಕಾಂಗ್ರೆಸ್ ಇಲ್ಲವೇ ಜೆಡಿಎಸ್ ನಿಂದ ಸ್ಪರ್ಧಿಸಲು ಸಿದ್ಧ – ಪ್ರಮೋದ್ ಮಧ್ವರಾಜ್

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಇಲ್ಲವೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಜೆಡಿಎಸ್ ನಾಯಕರು ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಕೇಳಿದ್ದಾರೆ. ಅದೇ ರೀತಿ ಈ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಡುವಂತೆಯೂ ಕಾಂಗ್ರೆಸ್ ನಾಯಕರು ಕೋರಿದ್ದಾರೆ.  ಕ್ಷೇತ್ರ ಬಿಟ್ಟು ಕೊಡದಿದ್ದರೆ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧ. ಪಕ್ಷ ಒಪ್ಪಿಕೊಂಡರೆ ಅಭ್ಯರ್ಥಿಯಾಗುತ್ತೇನೆ ಎಂದು ಪ್ರಮೋದ್ ಪ್ರತಿಕ್ರಿಯಿಸಿದ್ದಾರೆ. ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ಮೈತ್ರಿ ಪಕ್ಷ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಆದರೆ ಜೆಡಿಎಸ್ ನಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಎದುರಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img