ಮಂಡ್ಯ ಲೋಕಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿಗೆ ಸುಮಲತಾ ನಾಮಪತ್ರ ಸಲ್ಲಿಸಿದ್ರು. ನಾಮಪತ್ರಕ್ಕೆ ಅಹಿಂದ ನಾಯಕರು ಅನುಮೋದನೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಸುಮಲತಾ ರೋಡ್ ಶೋ ನಡೆಸಲಿದ್ದಾರೆ. ಸುಮಲತಾ ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಘೋಷಣೆ ಮುಗಿಲು ಮುಟ್ಟಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
