Sunday, June 13, 2021
Homeಜಿಲ್ಲೆಮಂಡ್ಯನಿಖಿಲ್ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಂದೂಡಿಕೆ

ಇದೀಗ ಬಂದ ಸುದ್ದಿ

ನಿಖಿಲ್ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಂದೂಡಿಕೆ

ಕಾಂಗ್ರೆಸ್ – ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸಲ್ಲಿಸಬೇಕಿದ್ದ ನಾಮಪತ್ರ ಪ್ರಕ್ರಿಯೆಯನ್ನ ಮುಂದೂಡಿದ್ದಾರೆ. ಮಾರ್ಚ್ 25ರಂದು ನಾಮಪತ್ರ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್ ಮಾಹಿತಿ ನೀಡಿದ್ದಾರೆ.  ನಿಖಿಲ್ ಇವತ್ತು ಮಂಡ್ಯ ಕ್ಷೇತ್ರದ ಬಸರಾಳು ಹೋಬಳಿಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ನಿನ್ನೆಯಷ್ಟೇ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಷ್ ನಾಮಪತ್ರ ಸಲ್ಲಿಸಿದ್ರು. ಸುಮಲತಾ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ರು. ಈ ಕುರಿತಂತೆ ಸಿದ್ದರಾಮಯ್ಯ ಅವರ ಬಳಿ ಸಿಎಂ ಕುಮಾರಸ್ವಾಮಿ ಚರ್ಚಿಸಿದ ಬಳಿಕ ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img