ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಸಿಲುಕಿರುವ ಮೂರು ಶವಗಳನ್ನ ಇವತ್ತು ಹೊರ ತೆಗೆಯಲಾಗಿದೆ. ಈವರೆಗೆ ಸುಮಾರು 55 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 15 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ.

ಕಟ್ಟಡ ನಿರ್ಮಾಣ ಕುಸಿತ ಸೂಚನೆ ಸಿಗುತ್ತಿದ್ದಂತೆ ಪಿಲ್ಲರ್ ನಿರ್ಮಾಣ ಮಾಡಲಾಗಿತ್ತು. ಪಿಲ್ಲರ್ ನಿರ್ಮಾಣದ ಹಿನ್ನೆಲೆಯಲ್ಲಿ ಕಟ್ಟಡದ ಪಾಯ ದುರ್ಬಲವಾಗಿತ್ತು. ಪಿಲ್ಲರ್ ನಿರ್ಮಿಸುತ್ತಿದ್ದಂತೆ ಕಟ್ಟಡ ಕುಸಿದು ಬಿದ್ದಿದೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾರನ್ನೂ ಬಂಧಿಸಿಲ್ಲ. ಎನ್ ಡಿಆರ್ ಎಫ್ ಸಿಬ್ಬಂದಿ, 150 ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.