ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಗಂಗಪ್ಪ ಶಿಂತ್ರಿ, ಮಾಜಿ ಸಚಿವ ವಿನಯ ಕುಲಕರ್ಣಿ ಮಾವನನ್ನು ಧಾರವಾಡ ಉಪ ನಗರ ಪೊಲೀಸರು ಬಂಧಿಸಿದ್ದಾರೆ. ಇನ್ನೂ 15 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಈವರೆಗೆ ಸುಮಾರು 55 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದ ಆರೋಪಿಗಳು ಸಂಜೆಯೊಳಗೆ ಶರಣಾಗೋ ಸಾಧ್ಯತೆ ಇದೆ.
