Thursday, September 23, 2021
Homeರಾಜಕೀಯಕಮಲದ ತೆಕ್ಕೆಗೆ ಕ್ರಿಕೆಟಿಗ ಗೌತಮ್ ಗಂಭೀರ್

ಇದೀಗ ಬಂದ ಸುದ್ದಿ

ಕಮಲದ ತೆಕ್ಕೆಗೆ ಕ್ರಿಕೆಟಿಗ ಗೌತಮ್ ಗಂಭೀರ್

ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್  ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ದೆಹಲಿ ಕಚೇರಿಯಲ್ಲಿ ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ , ಅರುಣ್ ಜೇಟ್ಲಿ ನೇತೃತ್ವದಲ್ಲಿ ಗೌತಮ್ ಗಂಭೀರ ಬಿಜೆಪಿಗೆ ಸೇರಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗೌತಮ್ ಗಂಭೀರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಬಳಿಕ ಮಾತನಾಡಿದ ಗೌತಮ್ ಗಂಭೀರ್  ಪ್ರಧಾನಿ ನರೇಂದ್ರ ಮೋದಿ ಅವರಿಂದ ನಾನು ಸ್ಫೂರ್ತಿಗೊಂಡಿದ್ದಾನೆ. ಪಕ್ಷಕ್ಕೆ ಸೇರಲು ಅವಕಾಶ ನೀಡಿದಕ್ಕೆ ನಾನು ಧನ್ಯವಾದಗಳು ಎಂದು ಹೇಳಿದ್ದಾರೆ. ಗೌತಮ್ ಗಂಭೀರ್ ಲೋಕಸಭಾ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಹಾಲಿ ಸಂಸದೆ ಮೀನಾಕ್ಷಿ ಲೇಖಿ ಅವರ ನವದೆಹಲಿ ಕ್ಷೇತ್ರವನ್ನು ಗೌತಮ್ ಗಂಭೀರ್ ಅವರಿಗೆ ಬಿಟ್ಟುಕೊಡಲು ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img