Thursday, September 23, 2021
Homeದೇಶಕಾಂಗ್ರೆಸ್ ಡೈರಿ ಬಾಂಬ್ ನಕಲಿ – ಯಡಿಯೂರಪ್ಪ ಸ್ಪಷ್ಟನೆ

ಇದೀಗ ಬಂದ ಸುದ್ದಿ

ಕಾಂಗ್ರೆಸ್ ಡೈರಿ ಬಾಂಬ್ ನಕಲಿ – ಯಡಿಯೂರಪ್ಪ ಸ್ಪಷ್ಟನೆ

ಕೇಂದ್ರ ನಾಯಕರಿಗೆ 1800 ಕೋಟಿ ಹಣ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​​​. ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಯಡಿಯೂರಪ್ಪ, ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರು ವೈಚಾರಿಕವಾಗಿ ದಿವಾಳಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಜನಪ್ರಿಯತೆ ದಿನ ಕಳೆದಂತೆ ಹೆಚ್ಚುತ್ತಿದೆ. ಇದರಿಂದ ಕಾಂಗ್ರೆಸ್‌ನ ನಾಯಕರು  ಹತಾಶರಾಗಿದ್ದಾರೆ. ಈ ಹಿಂದೆಯೇ ಆದಾಯ ತೆರಿಗೆ ಇಲಾಖೆ ದಾಖಲೆಗಳನ್ನು ಮತ್ತು ನನ್ನ ಕೈ ಬರಹ ಹಾಗೂ ಸಹಿಯನ್ನು ತಪಾಸಣೆಗೆ ಒಳಪಡಿಸಿದೆ. ಅಂದು ಈ ದಾಖಲೆಗಳೆಲ್ಲ ನಕಲಿ ಎಂದು ಸಾಬೀತಾಗಿದೆ. ಇದರ ಹಿಂದೆ ರಾಜಕೀಯವಾಗಿ ಲಾಭ ಪಡೆಯುವ ಉದ್ದೇಶ ಬಿಟ್ಟರೇ ಯಾವುದೇ ವಾಸ್ತವಾಂಶ ಇಲ್ಲ. ಕಾಂಗ್ರೆಸ್ ನಾಯಕರು ಪ್ರಸ್ತಾಪಿಸಿರುವ ವಿಷಯಗಳು ಅಪ್ರಸ್ತುತ ಮತ್ತು ಸುಳ್ಳಿನ ಕಂತೆ. ಈ ವಿಷಯ ಮುಗಿದ ಅಧ್ಯಾಯ ಎಂದು ಬಿಎಸ್ ವೈ ಸ್ಪಷ್ಟನೆ ನೀಡಿದ್ದಾರೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img