Wednesday, September 22, 2021
Homeರಾಜಕೀಯರಾಹುಲ್ ಗಾಂಧಿ ಕೇರಳದ ವಯನಾಡ್ ನಿಂದಲೂ ಕಣಕ್ಕೆ !

ಇದೀಗ ಬಂದ ಸುದ್ದಿ

ರಾಹುಲ್ ಗಾಂಧಿ ಕೇರಳದ ವಯನಾಡ್ ನಿಂದಲೂ ಕಣಕ್ಕೆ !

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕೇರಳದ ವಯನಾಡ್‌ ಕ್ಷೇತ್ರದಿಂದಲೂ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆ ಇದೆ . ಎಐಸಿಸಿ ಪ್ರಧಾನ ಕಾರ್ಯದರ್ಶಿ ಉಮ್ಮನ್‌ ಚಾಂಡಿ, ವಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ ಸೇರಿದಂತೆ ಕೇರಳದಲ್ಲಿನ ಉನ್ನತ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿ ವಯನಾಡ್‌ ಕ್ಷೇತ್ರದಿಂದಲೂ ಸ್ಪರ್ಧಿಸಬೇಕೆಂಬ ಪ್ರಸ್ತಾಪ ಮುಂದಿಟ್ಟಿದ್ದಾರೆ. ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ.  ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದಕ್ಷಿಣದ ರಾಜ್ಯಗಳಿಂದ ಸ್ಪರ್ಧಿಸಿದ್ದಾರಾದರೂ ಕೇರಳದಿಂದ ಈ ತನಕ ಸ್ಪರ್ಧಿಸಿಲ್ಲ. ಇಂದಿರಾ ಗಾಂಧಿ ಅವರು 1978ರಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದಲೂ ಸೋನಿಯಾ ಗಾಂಧಿ 1999ರಲ್ಲಿ ಬಳ್ಳಾರಿ ಕ್ಷೇತ್ರದಿಂದಲೂ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img