Wednesday, September 22, 2021
Homeಜಿಲ್ಲೆಕೋಲಾರಪತಿಯ ಅನೈತಿಕ ಸಂಬಂಧ ಹಿನ್ನೆಲೆ - ಹೆತ್ತ ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಇದೀಗ ಬಂದ ಸುದ್ದಿ

ಪತಿಯ ಅನೈತಿಕ ಸಂಬಂಧ ಹಿನ್ನೆಲೆ – ಹೆತ್ತ ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನ ತಂತಾರ್ಲಾಹಳ್ಳಿ ಗ್ರಾಮದಲ್ಲಿ ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಮಹಿಳೆಯೊಬ್ಬಳು ಹೆತ್ತ ಮಕ್ಕಳಿಗೆ ವಿಷ ಕೊಟ್ಟು ತಾನು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.  ತಾಯಿ ರಾಧಮ್ಮ  ತನ್ನ ಇಬ್ಬರು ಮಕ್ಕಳಾದ ಮಧು (4),ಕುಮಾರ್ (2)ಗೆ ಹಾಲಿನಲ್ಲಿ ವಿಷ ಬೆರೆಸಿ ಮಕ್ಕಳಿಗೆ ಬಲವಂತವಾಗಿ ಕುಡಿಸಿ ನಂತರ ತಾನು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ  ದಾಖಲಿಸಲಾಯಿತಾದ್ರೂ ಮಾರ್ಗ ಮಧ್ಯದಲ್ಲಿ ಇಬ್ಬರು ಮಕ್ಕಳು ಕೊನೆಯುಸಿರೆಳೆದಿದ್ದಾರೆ.  ರಾಧಮ್ಮ ಸ್ಥಿತಿ ಚಿಂತಾಜನಕವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ  ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img