ಚಿಕ್ಕಮಗಳೂರು -ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಈಗಾಗಲೇ ಉಡುಪಿ ಯಲ್ಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ಕೃಷ್ಣ ಮಠಕ್ಕೆ ಭೇಟಿ ನೀಡಿ ಕನಕನ ಕಿಂಡಿ ಮೂಲಕ ಕೃಷ್ಣನ ದರ್ಶನ ಪಡೆದರು. ಇಂದು ಅವರು ಮಣಿಪಾಲದ ಕಂಟ್ರಿ ಇನ್ ಹೊಟೇಲ್ನಲ್ಲಿ ಮೀನುಗಾರ ಸಮುದಾಯದ ನಿಯೋಗದ ಜೊತೆ ಮಾತುಕತೆ ನಡೆಸಲಿದ್ದಾರೆ. ಮಲ್ಪೆಯಿಂದ ನಾಪತ್ತೆಯಾಗಿರುವ ಮೀನುಗಾರರ ಮನೆಗಳಿಗೆ ತೆರಳಿ ಸಾಂತ್ವನ ಹೇಳಲಿದ್ದಾರೆ. ನಂತರ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ನಡೆಯುವ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಬಳಿಕ, ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ.
