Wednesday, September 22, 2021
Homeಜಿಲ್ಲೆಬೆಂಗಳೂರುತೇಜಸ್ವಿ ಸೂರ್ಯ ನಾಮಪತ್ರ – ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ

ಇದೀಗ ಬಂದ ಸುದ್ದಿ

ತೇಜಸ್ವಿ ಸೂರ್ಯ ನಾಮಪತ್ರ – ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸಿದ್ರು.
ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆಗೂ ಮುನ್ನವೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ನಾಯಕರ ಮಧ್ಯೆ ಭಿನ್ನಮತ ಶುರುವಾಗಿದೆ. ನಾಮಪತ್ರ ಸಲ್ಲಿಕೆಗಾಗಿ ಬಿಬಿಎಂಪಿ ಕಚೇರಿಗೆ ಪೋಷಕರೊಂದಿಗೆ ತೇಜಸ್ವಿ ಸೂರ್ಯ ಆಗಮಿಸಿದ್ದರು.  ತೇಜಸ್ವಿ ಸೂರ್ಯ ನಿರೀಕ್ಷೆ ಮಾಡಿದ್ದ ಕೆಲವು ನಾಯಕರು ಬಂದಿಲ್ಲ ಎನ್ನಲಾಗಿದೆ. ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರ ಶೇಖರ್, ಬಿಬಿಎಂಪಿಯ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್. ರಮೇಶ್, ಪಾಲಿಕೆ ಸದಸ್ಯ ಸಂಗಾತಿ ವೆಂಕಟೇಶ್ ಸಾಥ್ ನೀಡಿದರು. ಇನ್ನು ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ತಡವಾಗಿ ಬಂದು ಬೆಂಬಲ ಸೂಚಿಸಿದರು.

 ಅನಂತ್‍ಕುಮಾರ್ ನಾಮಪತ್ರ ಸಲ್ಲಿಸುವಾಗ ಮಾಜಿ ಡಿಸಿಎಂ ಆರ್.ಅಶೋಕ್ ಹಾಜರಿರುತ್ತಿದ್ದರು. ಇವತ್ತು ಆರ್ ಅಶೋಕ್ ಅನುಪಸ್ಥಿತಿ ಕಾಡುತ್ತಿತ್ತು. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತ್ ಕುಮಾರ್ ಅವರನ್ನ ಬಿಜೆಪಿ ಕಣಕ್ಕೆ ಇಳಿಸಲಿದೆ ಅಂತಾ ಹೇಳಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಬಿಜೆಪಿ ಹೈಕಮಾಂಡ್​ ತೇಜಸ್ವಿ ಸೂರ್ಯಗೆ ಮಣೆ ಹಾಕಿದೆ.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img