Wednesday, September 22, 2021
Homeಜಿಲ್ಲೆತುಮಕೂರುಏ.1 ರಂದು ಸಿದ್ಧಗಂಗಾ ಶ್ರೀಗಳ 112 ನೇ ಜಯಂತಿ: ಸಿದ್ಧಲಿಂಗ ಸ್ವಾಮೀಜಿ

ಇದೀಗ ಬಂದ ಸುದ್ದಿ

ಏ.1 ರಂದು ಸಿದ್ಧಗಂಗಾ ಶ್ರೀಗಳ 112 ನೇ ಜಯಂತಿ: ಸಿದ್ಧಲಿಂಗ ಸ್ವಾಮೀಜಿ

ತುಮಕೂರು: ಪದ್ಮಭೂಷಣ, ಕರ್ನಾಟಕರತ್ನ, ತ್ರಿವಿಧ ದಾಸೋಹಿ ಲಿಂ.ಡಾ.ಶ್ರೀ ಶಿವಕುಮಾರ ಶ್ರೀಗಳ 112ನೇ ಜಯಂತಿ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಏ.1 ರಂದು ಸಿದ್ಧಗಂಗಾ ಮಠದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.

ಸಿದ್ಧಗಂಗಾ ಮಠದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿವರ್ಷದಂತೆ ಶ್ರೀಗಳ ಹುಟ್ಟು ಹಬ್ಬವನ್ನು ಶ್ರೀಮಠದಲ್ಲಿ ಆಚರಣೆ ಮಾಡಲಾಗುತ್ತದೆ‌. ಶ್ರೀಗಳು ನಮ್ಮ ಜೊತೆ ಇದ್ದಾಗ ಜನ್ಮದಿನೋತ್ಸವ ಮತ್ತು ಗುರುವಂದನೆ ಕಾರ್ಯಕ್ರಮ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಶ್ರೀಗಳ ಹುಟ್ಟು ಹಬ್ಬವನ್ನು ಜಯಂತಿಯ ರೂಪದಲ್ಲಿ ಆಚರಣೆ ‌ಮಾಡಲಾಗುತ್ತದೆ ಎಂದರು.

ಏ.1 ರಂದು ನಡೆಯುವ ಶ್ರೀಗಳ ಜಯಂತಿ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಮೈಸೂರು ರಾಜವಂಶಸ್ಥ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ.    ಮೈಸೂರಿನ ಶ್ರೀ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ಮತ್ತು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ದಿವ್ಯ ನೇತೃತ್ವ ವಹಿಸಲಿದ್ದಾರೆ. ಚಿತ್ರದುರ್ಗ ಇತರ ಜಿಲ್ಲೆಯ ಮುರುಘಾಮಠದ ಅಧ್ಯಕ್ಷ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು, ಮುಂಡರಗಿ ಸಂಸ್ಥಾನಮಠದ ಜಗದ್ಗುರು ಶ್ರೀ ಅನ್ನದಾನ ಮಹಾಸ್ವಾಮಿಗಳು, ಉಜ್ಜಯಿನಿಯ ಶ್ರೀ ಉಜ್ಜಯಿನಿ ಸದ್ಧರ್ಮ ಸಿಂಹಾಸನ ಮಹಾಸಂಸ್ಥಾನಮಠದ ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಉಡುಪಿಯ ಪೇಜಾವರಮಠದ ಜಗದ್ಗುರು ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ದಿವ್ಯಸಾನಿಧ್ಯ ವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಡಾ.ಪ್ರದೀಪ್ ಕುಮಾರ್ ಹೆಬ್ರಿಯವರ ಪರಂಜ್ಯೋತಿ ಮಹಾಕಾವ್ಯ ಮತ್ತು ಎಂ.ಎಸ್.ಶಶಿಧರ್ ರಚಿಸಿದ ಚಿತ್ರಸಂಗಮ ಗ್ರಂಥ ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ಮಧ್ಯಾಹ್ನ 3 ಗಂಟೆಗೆ ಹೆಸರಾಂತ ಗಾಯಕಿ ಸಂಗೀತಾ ಕಟ್ಟಿ ಅವರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img