Wednesday, September 22, 2021
Homeಜಿಲ್ಲೆಚಾಮರಾಜನಗರಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಹಣ - ಇದು ದಾಖಲೆಯ ಪ್ರಮಾಣದ ಕಾಂಚಾಣ !

ಇದೀಗ ಬಂದ ಸುದ್ದಿ

ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಹಣ – ಇದು ದಾಖಲೆಯ ಪ್ರಮಾಣದ ಕಾಂಚಾಣ !

ರಾಜ್ಯದ ಅತೀ ಹೆಚ್ಚು ಆದಾಯ ತರುವ ದೇವಸ್ಥಾನಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹಣ ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಕಳೆದ ಒಂದು ತಿಂಗಳಲ್ಲಿ ಭಕ್ತರಿಂದ ಕಾಣಿಕೆ ರೂಪದಲ್ಲಿ ಬಂದ ಹಣ ಸಂಗ್ರಹವಾಗಿದೆ. ಹುಂಡಿಯಲ್ಲಿ ಒಟ್ಟು 2 ಕೋಟಿ, 13 ಲಕ್ಷದ 93 ಸಾವಿರ ರೂ. ಹಾಗೂ 55 ಗ್ರಾಂ ಚಿನ್ನ ಹಾಗೂ 1 ಕೆ.ಜಿ 800 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಮಲೆಮಹದೇಶ್ವರಬೆಟ್ಟದ ಹುಂಡಿಯಲ್ಲಿ ಮೂರೇ ದಿನದಲ್ಲಿ 1.44 ಕೋಟಿ ರೂ. ಹಣ ಸಂಗ್ರವಾಗಿತ್ತು. ದೀಪಾವಳಿ ಹಬ್ಬದ ಸಮಯದಲ್ಲಿ ಮೂರು ದಿನಗಳ ಕಾಲ ನಡೆದ ದೊಡ್ಡ ರಥೋತ್ಸವ ಜಾತ್ರೆಯ ವೇಳೆ ಭಕ್ತರಿಂದ ಇಷ್ಟು ಮೊತ್ತದ ಹಣ ಸಂಗ್ರಹವಾಗಿತ್ತು.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img