Tuesday, September 21, 2021
Homeರಾಜಕೀಯರಮೇಶ್ ಕತ್ತಿಗೆ ಸಿಗದ ಲೋಕಸಭಾ ಟಿಕೆಟ್ – ಬಿಎಸ್ ವೈಗೆ ಹಿನ್ನಡೆ

ಇದೀಗ ಬಂದ ಸುದ್ದಿ

ರಮೇಶ್ ಕತ್ತಿಗೆ ಸಿಗದ ಲೋಕಸಭಾ ಟಿಕೆಟ್ – ಬಿಎಸ್ ವೈಗೆ ಹಿನ್ನಡೆ

ಬಿಜೆಪಿ ಕರ್ನಾಟಕದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದೆ. ಬಿಡುಗಡೆ ಆಗಿರುವ 12ನೇ ಪಟ್ಟಿಯಲ್ಲಿ ರಾಜ್ಯದ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಪ್ರಮುಖವಾಗಿ ಬಹು ನಿರೀಕ್ಷೆ ಮೂಡಿಸಿದ್ದ ಚಿಕ್ಕೋಡಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಣ್ಣ ಸಾಹೇಬ್ ಜೊಲ್ಲೆ ಪಕ್ಷದ ಟಿಕೆಟ್ ಪಡೆಯಲು ಯಶಸ್ವಿಯಾಗಿದ್ದಾರೆ. ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿಗೆ ಟಿಕೆಟ್ ನಿರಾಕರಿಸಲಾಗಿದೆ. 

ಕೊಪ್ಪಳ ಕ್ಷೇತ್ರದಲ್ಲಿ ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ರಾಯಚೂರು ಕ್ಷೇತ್ರದಲ್ಲಿ ರಾಜಾ ಅಮರೇಶ್ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ. ಇಲ್ಲಿ ವಾಲ್ಮೀಕಿ ಸಮುದಾಯದ ಮತಗಳು ಪ್ರಮುಖ. ಹೀಗಾಗಿ ರಾಜಾ ಅಮರೇಶ್ ನಾಯಕ್ ಅವರಿಗೆ ಟಿಕೆಟ್ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ರಮೇಶ್ ಕತ್ತಿ ಪರ ಲಾಬಿ ಮಾಡಿದ್ರು ಹೈಕಮಾಂಡ್  ತನ್ನದೇ ನಿರ್ಧಾರ ತೆಗೆದುಕೊಂಡಿದೆ. ಈ ಮೂಲಕ ಬಿಎಸ್ ವೈಗೆ ಮತ್ತೊಮ್ಮೆ ಹೈಕಮಾಂಡ್ ಮಟ್ಟದಲ್ಲಿ ಹಿನ್ನಡೆಯಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img