Thursday, September 23, 2021
Homeಜಿಲ್ಲೆತುಮಕೂರುಸಿದ್ದರಾಮಯ್ಯ ಸಂಧಾನ ಸಕ್ಸಸ್ – ಮುದ್ದಹನುಮೇಗೌಡ ನಾಮಪತ್ರ ವಾಪಾಸ್

ಇದೀಗ ಬಂದ ಸುದ್ದಿ

ಸಿದ್ದರಾಮಯ್ಯ ಸಂಧಾನ ಸಕ್ಸಸ್ – ಮುದ್ದಹನುಮೇಗೌಡ ನಾಮಪತ್ರ ವಾಪಾಸ್

ಮಾಜಿ ಪ್ರಧಾನಿ ದೇವೇಗೌಡರು ನಿಟ್ಟುಸಿರು ಬಿಟ್ಟಿದ್ದಾರೆ. ತುಮಕೂರಿನಲ್ಲಿ ದೊಡ್ಡ ಗೌಡರು ಸ್ಫರ್ಧಿಸಲು ಇದ್ದ ಎಲ್ಲಾ ಅಡೆತಡೆಗಳು ದೂರವಾಗಿದೆ. ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ನಾಯಕರ ಮಹತ್ವದ ಸಭೆಯಲ್ಲಿ ಸಿದ್ದರಾಮಯ್ಯ ನಡೆಸಿದ ಸಂಧಾನ ಸಕ್ಸಸ್ ಆಗಿದೆ. ಸಿದ್ದರಾಮಯ್ಯ ಮಾತಿನಂತೆ ಮುದ್ದಹನುಮೇಗೌಡ ನಾಮಪತ್ರ ವಾಪಾಸ್ ಪಡೆಯಲು ನಿರ್ಧರಿಸಿದ್ದಾರೆ.

ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಸಿ.ಎಂ ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ಸಚಿವ ಎಸ್.ಆರ್.ಶ್ರೀನಿವಾಸ್ ಸೇರಿದಂತೆ ಜೆ.ಡಿ.ಎಸ್. ಮುಖಂಡರು ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮುದ್ದಹನುಮೇಗೌಡರ ಮನವೊಲಿಸುವ ಪ್ರಯತ್ನ ಮಾಡಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img