Sunday, September 19, 2021
Homeಜಿಲ್ಲೆಬೆಂಗಳೂರುತೇಜಸ್ವಿನಿ ಅನಂತ್ ಕುಮಾರ್ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕ

ಇದೀಗ ಬಂದ ಸುದ್ದಿ

ತೇಜಸ್ವಿನಿ ಅನಂತ್ ಕುಮಾರ್ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕ

ತೇಜಸ್ವಿನಿ ಅನಂತ್​ಕುಮಾರ್ ಅವರನ್ನ​​ ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ. ತೇಜಸ್ವಿನಿ ಅನಂತ್​ಕುಮಾರ್​ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ ಎಂದು ಘೋಷಿಸಲು ನನಗೆ ಸಂತೋಷವಾಗ್ತಿದೆ. ಅವರಿಗೆ ಒಳ್ಳೆಯದಾಗಲಿ ಎಂದು ಆಶಿಸುತ್ತೇನೆ ಅಂತ ಯಡಿಯೂರಪ್ಪ ಬರೆದುಕೊಂಡಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿನಿ ಅನಂತ್​ಕುಮಾರ್​ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದ್ರೆ ಕೊನೇ ಘಳಿಗೆಯಲ್ಲಿ ತೇಜಸ್ವಿ ಸೂರ್ಯ ಹೆಸರು ಘೋಷಣೆಯಾಗಿದ್ದು, ಕೆಲ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸಿತ್ತು. ಇಂದು ಸಂಜೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅಮಿತ್ ಶಾ ರೋಡ್ ಶೋ ನಡೆಸಲಿದ್ದು, ಇದಕ್ಕೂ ಕೆಲ ಹೊತ್ತಿನ ಮೊದಲು ತೇಜಸ್ವಿನಿ ಅವರನ್ನು ಪಕ್ಷದ ಉಪಾಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img