Wednesday, September 22, 2021
Homeಜಿಲ್ಲೆಮಂಡ್ಯಮಂಡ್ಯದಲ್ಲಿ ಮುಂದುವರಿದ ಐಟಿ ರೇಡ್ – ನಿಖಿಲ್ ತಂಗಿದ್ದ ಹೊಟೇಲ್ ಗೆ ಶಾಕ್

ಇದೀಗ ಬಂದ ಸುದ್ದಿ

ಮಂಡ್ಯದಲ್ಲಿ ಮುಂದುವರಿದ ಐಟಿ ರೇಡ್ – ನಿಖಿಲ್ ತಂಗಿದ್ದ ಹೊಟೇಲ್ ಗೆ ಶಾಕ್

ಮಂಡ್ಯ ಜಿಲ್ಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್‍ನ ಬೃಂದಾವನದಲ್ಲಿರುವ ಖಾಸಗಿ ಹೋಟೆಲ್ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಾಮಾನ್ಯವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಕ್ಷೇತ್ರಕ್ಕೆ ಆಗಮಿಸುವ ಹಲವು ಗಣ್ಯ ನಾಯಕರು ಇದೇ ಹೋಟೆಲಿನಲ್ಲಿ ವಾಸ್ತವ್ಯ ಹೂಡುತ್ತಾರೆ. ಈ ಹಿನ್ನೆಲೆಯಲ್ಲಿ ಐಟಿ ರೇಡ್ ಆಗಿರುವ ಶಂಕೆ ವ್ಯಕ್ತವಾಗಿದೆ.  ಕಳೆದ ರಾತ್ರಿ ಮೈತ್ರಿ ಅಭ್ಯರ್ಥಿ ನಿಖಿಲ್ ಇದೇ ಹೋಟೆಲ್ ನಲ್ಲಿ ತಂಗಿದ್ದರು.

ನಿಖಿಲ್ ತಂಗಿದ್ದ ಹೋಟೆಲ್

ಇಂದು ಮಧ್ಯಾಹ್ನದ ವೇಳೆ ಆಗಮಿಸಿದ ಐಟಿ ಅಧಿಕಾರಿಗಳ ತಂಡ ಸುಮಾರು ಅರ್ಧ ಗಂಟೆ ಕಾಲ ಹೋಟೆಲ್ ಕೊಠಡಿಯನ್ನು ಪರಿಶೀಲನೆ ನಡೆಸಿದೆ.

ನಿನ್ನೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ನಾಯಕ ಎಂ.ಎಸ್ ಆತ್ಮಾನಂದ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img