Wednesday, September 22, 2021
Homeಜಿಲ್ಲೆಬೆಂಗಳೂರುಧಾರವಾಡದ ಬಳಿಕ ಈಗ ಬೆಂಗಳೂರು ಸರದಿ – ಕಟ್ಟಡ ಕುಸಿದು ಇಬ್ಬರ ದುರ್ಮರಣ

ಇದೀಗ ಬಂದ ಸುದ್ದಿ

ಧಾರವಾಡದ ಬಳಿಕ ಈಗ ಬೆಂಗಳೂರು ಸರದಿ – ಕಟ್ಟಡ ಕುಸಿದು ಇಬ್ಬರ ದುರ್ಮರಣ

ಧಾರವಾಡ ಕಟ್ಟಡ ಕುಸಿತ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಇತ್ತ ಬೆಂಗಳೂರಿನಲ್ಲೂ ಅಂತಹುದೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

ಬೆಂಗಳೂರಿನ ಆರ್ ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮುಂಜಾನೆ 4.30ರ ಸುಮಾರಿಗೆ ಕಟ್ಟಡದ ಸೆಟ್ರಿಂಗ್ ಕುಸಿದ ಪರಿಣಾಮ ಅಲ್ಲಿದ್ದ ಹಲವು ಕಟ್ಟಡ ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿದ್ದರು. ಈ ಪೈಕಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮೃತರನ್ನು ರಾಕೇಶ್ ಹಾಗೂ ರಾಹುಲ್ ಎಂದು ಗುರುತಿಸಲಾಗಿದೆ. 

ರಾಕೇಶ್ ಹಾಗೂ ರಾಹುಲ್ ಮೂಲತಃ ಬಿಹಾರ ಮೂಲದವರಾಗಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದರು. ಘಟನೆಯಲ್ಲಿ ನಾಲ್ಕು ಜನರಿಗೆ ಗಂಭೀರ ಗಾಯವಾಗಿದೆ. ಆರ್ ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img