Wednesday, September 22, 2021
Homeಜಿಲ್ಲೆಬೆಂಗಳೂರುಕಾಂಗ್ರೆಸ್ ಗೆ ಎಚ್.ಟಿ.ಸಾಂಗ್ಲಿಯಾನ ಗುಡ್ ಬೈ !

ಇದೀಗ ಬಂದ ಸುದ್ದಿ

ಕಾಂಗ್ರೆಸ್ ಗೆ ಎಚ್.ಟಿ.ಸಾಂಗ್ಲಿಯಾನ ಗುಡ್ ಬೈ !

ಲೋಕಸಭಾ ಚುನಾವಣೆಯಲ್ಲಿ ಕ್ರೈಸ್ತ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೇಸರಗೊಂಡು ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಎಐಸಿಸಿ ಅಧ್ಯಕ್ಷ  ರಾಹುಲ್ ಗಾಂಧಿಗೆ ರಾಜೀನಾಮೆ ಪತ್ರ ಬರೆದಿರುವ ಎಚ್.ಟಿ.ಸಾಂಗ್ಲಿಯಾನ, ಕಳೆದ ಲೋಕಸಭಾ ಅವಧಿಯಲ್ಲಿ ತಮ್ಮೊಂದಿಗೆ ಕೆಲಸ ಮಾಡಿದ್ದೇನೆ. ಪಕ್ಷದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯನಾಗಿ ಚುನಾವಣೆ ಪ್ರಚಾರ ಸೇರಿದಂತೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಂದೂ ಕ್ಷೇತ್ರವನ್ನು ಕ್ರೈಸ್ತ ಸಮುದಾಯಕ್ಕೆ ಬಿಟ್ಟುಕೊಡದೆ ಕಾಂಗ್ರೆಸ್ ನಾಯಕರು ಕಡೆಗಣಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಕೇಂದ್ರದಲ್ಲಿ ಅಲ್ಪಸಂಖ್ಯಾತ ಮತ್ತು ಕ್ರೈಸ್ತ ಸಮುದಾಯಗಳ ಮತದಾರರ ಸಂಖ್ಯೆ ಹೆಚ್ಚಿದೆ. ಅವರ ದಿಢೀರ್‌ ರಾಜೀನಾಮೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಕ್ರೈಸ್ತ ಸಮುದಾಯದ ಮತಗಳು ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img