Sunday, September 19, 2021
HomeದೇಶEC ಖಡಕ್ ಸೂಚನೆ –ಕೇಂದ್ರ ಸರ್ಕಾರಕ್ಕೆ ಮುಜುಗರ !

ಇದೀಗ ಬಂದ ಸುದ್ದಿ

EC ಖಡಕ್ ಸೂಚನೆ –ಕೇಂದ್ರ ಸರ್ಕಾರಕ್ಕೆ ಮುಜುಗರ !

ತನಿಖಾ ಸಂಸ್ಥೆಗಳು ತಟಸ್ಥವಾಗಿ ಕಾರ್ಯ ನಿರ್ವಹಿಸಲು ನಿರ್ದೇಶಿಸುವಂತೆ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಕೇಂದ್ರ ಚುನಾವಣಾ ಆಯೋಗ ಖಡಕ್ ಸೂಚನೆ ನೀಡಿದೆ. ವಿರೋಧ ಪಕ್ಷಗಳ ಮುಖಂಡರ ಮೇಲೆ ಕೇಂದ್ರ ಸರ್ಕಾರ ಸುಖಾಸುಮ್ಮನೆ ಐಟಿ ದಾಳಿ ನಡೆಸುತ್ತಿದೆ ಅಂತಾ ವಿಪಕ್ಷಗಳು ಆರೋಪಿಸಿದ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗ ಈ ಖಡಕ್ ಸಂದೇಶ ರವಾನಿಸಿದೆ. ಅಕ್ರಮಗಳು ನಡೆದ ಶಂಕೆ ಆಧರಿಸಿ ದಾಳಿ ನಡೆಸುವುದಾದರೆ ಆಯಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯ ಅಂತಾ ಕೇಂದ್ರ ಹಣಕಾಸು ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಚುನಾವಣಾ ಆಯೋಗ ಉಲ್ಲೇಖಿಸಿದೆ.

ಕೇಂದ್ರ ಹಣಕಾಸು ಕಾರ್ಯಾಲಯದ ಅಡಿಯಲ್ಲಿ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ (ಐಟಿ), ಹಾಗೂ ಆದಾಯ ಗುಪ್ತಚರ ನಿರ್ದೇಶನಾಲಯಗಳು ಬರುತ್ತವೆ.  ಕೆಲ ದಿನಗಳ ಹಿಂದೆ ಐಟಿ ಅಧಿಕಾರಿಗಳು ಕರ್ನಾಟಕದಲ್ಲಿ ಜೆಡಿಎಸ್​, ಕಾಂಗ್ರೆಸ್ ಮುಖಂಡರ ಮನೆ ಮೇಲೆ ಹಾಗೂ ಆಂಧ್ರ ಪ್ರದೇಶ, ಮಧ್ಯಪ್ರದೇಶ ಮತ್ತು ತಮಿಳುನಾಡಿನಲ್ಲಿ ದಾಳಿ ನಡೆಸಿ ದಾಖಲೆಯಿಲ್ಲದ ಕೋಟಿಗಟ್ಟಲೆ ಹಣವನ್ನು ವಶಪಡಿಸಿಕೊಂಡಿದ್ದರು.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img