ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರ ಬಂಡಾಯ ತೀವ್ರಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಜಿಲ್ಲೆಯ 7 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನ ಉಚ್ಚಾಟನೆ ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ. ನಾಗಮಂಗಲ, ಮಳವಳ್ಳಿ, ಕೆಎಂ ದೊಡ್ಡಿ, ಕೆಆರ್ ಪೇಟೆ ಮೇಲುಕೋಟೆ ನಗರ ಗ್ರಾಮಾಂತರ ಬ್ಲಾಕ್ ಅಧ್ಯಕ್ಷರನ್ನ ಉಚ್ಛಾಟನೆ ಮಾಡಲಾಗಿದೆ.

7 ಮಂದಿಯೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಬಹಿರಂಗವಾಗಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ವಜಾಗೊಳಿಸಲಾಗಿದೆ.
