Wednesday, September 22, 2021
Homeಜಿಲ್ಲೆಬೆಂಗಳೂರುರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋದಿ ಮತಬೇಟೆ...

ಇದೀಗ ಬಂದ ಸುದ್ದಿ

ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋದಿ ಮತಬೇಟೆ…

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಇಂದು ಮತ್ತೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಸಂಜೆ 5:30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೋದಿ ‘ವಿಜಯ ಸಂಕಲ್ಪ’ ಯಾತ್ರೆಯ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಮೋದಿ ಆಗಮನದ ಹಿನ್ನೆಲೆ, ಬೆಂಗಳೂರಿನ ಮೇಖ್ರಿ ಸರ್ಕಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಆರ್.ಅಶೋಕ್, ಅರವಿಂದ ಲಿಂಬಾವಳಿ, ಎಸ್. ಸುರೇಶ್‌ಕುಮಾರ್, ಡಾ. ಸಿ.ಎನ್.ಅಶ್ವತ್ಥನಾರಾಯಣ್, ರವಿಸುಬ್ರಮಣ್ಯ, ಉದಯ್ ಗರುಡಾಚಾರ್ ಸೇರಿದಂತೆ ಲೋಕಸಭಾ ಅಭ್ಯರ್ಥಿಗಳಾದ ಡಿ.ವಿ. ಸದಾನಂದಗೌಡ, ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಭಾಗಿಯಾಗಲಿದ್ದಾರೆ. ಮೋದಿ ಆಗಮನದಿಂದಾಗಿ ಬೆಂಗಳೂರು ಟ್ರಾಫಿಕ್ ವ್ಯವಸ್ಥೆಯಲ್ಲಿ ಏರುಪೇರಾಗುವ ಸಾಧ್ಯತೆ ಇದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img