Wednesday, September 22, 2021
Homeರಾಜ್ಯಮೊದಲ ಹಂತದ ಚುನಾವಣೆ – ಇಂದು ಬಹಿರಂಗ ಪ್ರಚಾರಕ್ಕೆ ತೆರೆ

ಇದೀಗ ಬಂದ ಸುದ್ದಿ

ಮೊದಲ ಹಂತದ ಚುನಾವಣೆ – ಇಂದು ಬಹಿರಂಗ ಪ್ರಚಾರಕ್ಕೆ ತೆರೆ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳಿಗೆ ಇಂದು ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಗುರುವಾರ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮತದಾನ ನಡೆಯಲಿದೆ.  ಮತದಾನಕ್ಕೆ 48 ಗಂಟೆಗಳ ಮುಂಚೆ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ.

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸಹಿತ ಎಲ್ಲ ನಾಯಕರು ಮೈಸೂರು, ಮಂಡ್ಯ, ಹಾಸನ, ಬೆಂಗಳೂರು, ತುಮಕೂರು ಕ್ಷೇತ್ರಗಳಲ್ಲಿ ಇಂದು ಪ್ರಚಾರ ನಡೆಸಲಿದ್ದಾರೆ. ಮೊದಲ ಹಂತದಲ್ಲಿ ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ದಕ್ಷಿಣ, ಉತ್ತರ, ಕೇಂದ್ರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img