Thursday, September 23, 2021
Homeರಾಜ್ಯರಾಜ್ಯಾದ್ಯಂತ ಮೂರು ದಿನ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಇದೀಗ ಬಂದ ಸುದ್ದಿ

ರಾಜ್ಯಾದ್ಯಂತ ಮೂರು ದಿನ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು ಸೇರಿದಂತೆ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮೂರು ದಿನ ಅಕಾಲಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಗುಡುಗು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಪ್ರದೇಶದಲ್ಲಿ ಇಂದು ಸಂಜೆ ಮಳೆ ಸುರಿದಿದ್ದು, ರಾಜ್ಯದ  ನಾನಾ ಜಿಲ್ಲೆಗಳಲ್ಲಿಯೂ ಮಳೆ ಬಿದ್ದಿರುವ ಬಗ್ಗೆ ವರದಿಯಾಗಿದೆ. ಮಧ್ಯಾಹ್ನದ ವೇಳೆಗೆ ಆನೇಕಲ್ ತಾಲೂಕಿನ  ಅತ್ತಿಬೆಲೆ, ಚಂದಾಪುರ ಮತ್ತು ಹೆಬ್ಬಗೋಡಿ ಸರ್ಜಾಪುರ ಸುತ್ತಮುತ್ತ ಮಳೆಯಾಗಿದೆ. 
ದಾವಣಗೆರೆ, ಚಿಕ್ಕಮಗಳೂರು, ಕೊಡಗು  ಸೇರಿದಂತೆ ಅನೇಕ ಕಡೆಗಳಲ್ಲಿ ನಿನ್ನೆ ಆಲಿಕಲ್ಲು ಸಮೇತ ಮಳೆಯಾಗಿತ್ತು. ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಿದೆ. ಇದೇ ವೇಳೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಬಿಸಿಗಾಳಿಯಿಂದ ಕೂಡಿದ ಮಳೆ ಆರ್ಭಟಿಸಿದ್ದು, ಅಕಾಲಿಕ ಮಳೆಗೆ ಇದುವರೆಗೂ 38 ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್ ನಲ್ಲಿ 9 ಮಂದಿ,  ರಾಜಸ್ಥಾನದಲ್ಲಿ 6, ಮಧ್ಯಪ್ರದೇಶದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img