Sunday, May 16, 2021
Homeಜಿಲ್ಲೆಹಾಸನರೇವಣ್ಣ ಬೆಂಗಾವಲು ಪಡೆ ವಾಹನದಲ್ಲಿದ್ದ 1.20 ಲಕ್ಷ ಹಣ ಜಪ್ತಿ ..!

ಇದೀಗ ಬಂದ ಸುದ್ದಿ

ರೇವಣ್ಣ ಬೆಂಗಾವಲು ಪಡೆ ವಾಹನದಲ್ಲಿದ್ದ 1.20 ಲಕ್ಷ ಹಣ ಜಪ್ತಿ ..!

ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಬೆಂಗಾವಲು ಪಡೆ ವಾಹನದಲ್ಲಿದ್ದ 1.20 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ. ಹಾಸನ ಜಿಲ್ಲೆ ಹೊಳೆನರಸೀಪುರದ ಚನ್ನಾಂಬಿಕಾ ಚಿತ್ರಮಂದಿರ ಮುಂಭಾಗ ಹಣವನ್ನು ಜಪ್ತಿ ಮಾಡಲಾಗಿದೆ. ಮಂಗಳವಾರ ತಡರಾತ್ರಿ 12.45ರ ಸಮಯದಲ್ಲಿ ತಪಾಸಣೆ ನಡೆಸಿ ಹಣವನ್ನು ಜಪ್ತಿ ಮಾಡಲಾಗಿದೆ. ಸದ್ಯ ಬೆಂಗಾವಲುಪಡೆ ವಾಹನದಲ್ಲಿದ್ದ ಚಂದ್ರಯ್ಯ ಮತ್ತು ರವಿ ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಚುನಾವಣಾಧಿಕಾರಿ ವಿಕಾಸ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img