Thursday, September 23, 2021
Homeದೇಶಮೋದಿ ಓರ್ವ ಸುಳ್ಳುಗಾರ – ರಾಹುಲ್ ಗಾಂಧಿ ವಾಗ್ದಾಳಿ

ಇದೀಗ ಬಂದ ಸುದ್ದಿ

ಮೋದಿ ಓರ್ವ ಸುಳ್ಳುಗಾರ – ರಾಹುಲ್ ಗಾಂಧಿ ವಾಗ್ದಾಳಿ

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್  ಅಭ್ಯರ್ಥಿ ಸಂಸದ ಪ್ರಕಾಶ್ ಹುಕ್ಕೇರಿ ಪರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತಯಾಚಿಸಿದ್ರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಈ ಚುನಾವಣೆ 2 ವಿಚಾರಧಾರೆಗಳ ನಡುವಿನ ಹೋರಾಟವಾಗಿದೆ ಎಂದು ಹೇಳಿದ್ರು. ಮೋದಿ ಹೋದಲ್ಲೆಲ್ಲ ಸುಳ್ಳು ಹೇಳುತ್ತಾರೆ. ಎಲ್ಲರ ಖಾತೆಗೆ 15 ಲಕ್ಷ ರೂ. ನೀಡುತ್ತೇನೆ ಎಂದು ಹೇಳಿದ್ರು. ಆದರೆ,  1 ರೂ. ಕೂಡ ನೀಡಲಿಲ್ಲ. ಇದೇ ಕಾರಣಕ್ಕೆ ನ್ಯಾಯ್ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂದು ತಿಳಿಸಿದ್ರು. ನಮ್ಮ ಸರ್ಕಾರ ಬಂದರೆ ಜಿಎಸ್​ಟಿ ಸರಳೀಕರಣಗೊಳಿಸುತ್ತೇವೆ. ನಾವು ಅಧಿಕಾರಕ್ಕೆ ಬಂದರೆ ಗ್ರಾಮ ಪಂಚಾಯಿತಿಗಳಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ರಾಹುಲ್ ಭರವಸೆ ನೀಡಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img