ಹುಬ್ಬಳ್ಳಿ : ರಸ್ತೆ ಅಪಘಾತದಲ್ಲಿ ಪಾದಚಾರಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ನಡೆದಿದೆ.
ರಸ್ತೆ ದಾಟುವಾಗ ಟ್ರಕ್ ಗುದ್ದಿ ಪಾದಚಾರಿ ಪರಶುರಾಮ (58) ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತ ವ್ಯಕ್ತಿ ಪರಶುರಾಮ ಹುಬ್ಬಳ್ಳಿ ಗಿರಣಿ ಚಾಳ ನಿವಾಸಿ ಎಂದು ತಿಳಿದುಬಂದಿದೆ. ಹುಬ್ಬಳ್ಳಿಯ ಪೂರ್ವ ಸಂಚಾರಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.