Thursday, January 21, 2021
Home ಜಿಲ್ಲೆ ಲಂಚ ಸ್ವೀಕರಿಸುತ್ತಿದ್ದಾಗ ಹೆಲ್ತ್ ಇನ್ಸ್ ಪೆಕ್ಟರ್ ಅರೆಸ್ಟ್!

ಇದೀಗ ಬಂದ ಸುದ್ದಿ

ಲಂಚ ಸ್ವೀಕರಿಸುತ್ತಿದ್ದಾಗ ಹೆಲ್ತ್ ಇನ್ಸ್ ಪೆಕ್ಟರ್ ಅರೆಸ್ಟ್!

ಬೆಂಗಳೂರು : ಸ್ನೂಕರ್ ಪಾರ್ಲರ್ ನಡೆಸಲು ಟ್ರೇಡ್ ಲೈಸೆನ್ಸ್ ನೀಡುವ ಸಲುವಾಗಿ ಲಂಚದ ಹಣ ಸ್ವೀಕರಿಸುತ್ತಿದ್ದ ಬಿಬಿಎಂಪಿಯ ಬೊಮ್ಮನಹಳ್ಳಿ ವಲಯದ ಅರಕೆರೆ ವಾರ್ಡ್ ಹೆಲ್ತ್ ಇನ್ಸ್ ಪೆಕ್ಟರ್ ಪ್ರದೀಪ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಬೆಂಗಳೂರು ಠಾಣೆಯ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು ನಿವಾಸಿಯೊಬ್ಬರು ಸ್ನೂಕರ್ ಪಾರ್ಲರ್ ನಡೆಸಲು ಟ್ರೇಡ್ ಲೈಸೆನ್ಸ್ ಬೇಕೆಂದು ಅರಕೆರೆ ಬಿಬಿಎಂಪಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಟ್ರೇಡ್ ಲೈಸೆನ್ಸ್ ನೀಡಲು 10 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಬೆಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ದಾಖಲಾಗಿತ್ತು. ಅದರಂತೆ ಇಂದು ಹೆಲ್ತ್ ಇನ್ಸ್ ಪೆಕ್ಟರ್ 8 ಸಾವಿರ ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗೆ ಸಿಕ್ಕಿಬಿದ್ದರು. ತಕ್ಷಣ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಪ್ರದೀಪ್ ಅವರನ್ನು ಬಂಧಿಸಿ ಅವರಿಂದ ಲಂಚದ ಹಣವನ್ನು ವಶಪಡಿಸಿಕೊಂಡರು. ಪ್ರಕರಣದ ತನಿಖೆ ಮುಂದುವರೆದಿದೆ.    

TRENDING