Sunday, May 16, 2021
Homeಜಿಲ್ಲೆರಂಜಾನ್ ಹಬ್ಬಕ್ಕಾಗಿ ಮಸ್ಕಿ ಶಾಸಕರಿಂದ ಮುಸ್ಲಿಂ ಬಾಂಧವರಿಗಾಗಿ ಇಫ್ತಾರ್ ಕೂಟ

ಇದೀಗ ಬಂದ ಸುದ್ದಿ

ರಂಜಾನ್ ಹಬ್ಬಕ್ಕಾಗಿ ಮಸ್ಕಿ ಶಾಸಕರಿಂದ ಮುಸ್ಲಿಂ ಬಾಂಧವರಿಗಾಗಿ ಇಫ್ತಾರ್ ಕೂಟ

ರಾಯಚೂರು : ಮುಸ್ಲಿಂ ಧರ್ಮದ ಪವಿತ್ರ ರಂಜಾನ್ ಹಬ್ಬಕ್ಕಾಗಿ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಶಾಸಕ ಪ್ರತಾಪಗೌಡ ಪಾಟೀಲ ಇಫ್ತಾರ್ ಕೂಟವನ್ನು ಏರ್ಪಡಿಸಿದ್ದರು.

30 ದಿನಗಳ ಉಪವಾಸದ ನಂತರ ಆಚರಿಸುವ ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಿಗಾಗಿ ಈ ಇಫ್ತಾರ್ ಕೂಟವನ್ನು ಸ್ಥಳೀಯ ಶಾಸಕ ಪ್ರತಾಪಗೌಡ ಪಾಟೀಲ ಅವರು ಏರ್ಪಡಿಸಿದ್ದರು. ಮಸ್ಕಿ ಪಟ್ಟಣದ ಜುಮ್ಮಾ ಮಸೀದಿಯಲ್ಲಿ ಮಸ್ಕಿ ಕ್ಷೇತ್ರದ  ಇಫ್ತಾರ್ ಕೂಟ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪ್ರತಾಪಗೌಡ ಪಾಟೀಲ  ಇಸ್ಲಾಮಿನಲ್ಲಿ ಪವಿತ್ರ ರಂಜಾನ್ ಹಬ್ಬಕ್ಕೆ ಬಹಳ ಮಹತ್ವದ ಸ್ಥಾನವಿದೆ. ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ನನ್ನ ಹೃದಯಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು ತಿಳಿಸುತ್ತೇನೆ ಎಂದರು. ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಕೂಡಿ ಬಾಳೋಣ ಮತ್ತು ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ಭಾರತ ಒಂದು ಭವ್ಯ ಪ್ರಜಾಸತ್ತಾತ್ಮಕ ಮತ್ತು ಜಾತ್ಯತೀತ ರಾಷ್ಟ್ರವೆಂದು ತೋರಿಸೋಣ ಎಂದು ಹೇಳಿದರು.

ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಕೂಡಿ ಬಾಳೋಣ ಮತ್ತು ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ಭಾರತ ಒಂದು ಭವ್ಯ ಪ್ರಜಾಸತ್ತಾತ್ಮಕ ಮತ್ತು ಜಾತ್ಯತೀತ ರಾಷ್ಟ್ರವೆಂದು ತೋರಿಸೋಣ ಎಂದು ಶಾಸಕ ಪ್ರತಾಪಗೌಡ ಪಾಟೀಲ ಶುಭ ಹಾರೈಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img