Monday, January 18, 2021
Home ಜಿಲ್ಲೆ ಬೆಂಗಳೂರು ಹೆಚ್.ವಿಶ್ವನಾಥ್ ರಾಜೀನಾಮೆ ಅವರ ಪಕ್ಷಕ್ಕೆ ಬಿಟ್ಟಿದ್ದು, ನಾನು ಪ್ರತಿಕ್ರಿಯೆ ನೀಡಲ್ಲ-ಯಡಿಯೂರಪ್ಪ

ಇದೀಗ ಬಂದ ಸುದ್ದಿ

ಹೆಚ್.ವಿಶ್ವನಾಥ್ ರಾಜೀನಾಮೆ ಅವರ ಪಕ್ಷಕ್ಕೆ ಬಿಟ್ಟಿದ್ದು, ನಾನು ಪ್ರತಿಕ್ರಿಯೆ ನೀಡಲ್ಲ-ಯಡಿಯೂರಪ್ಪ

ಬೆಂಗಳೂರು: ಕಾಂಗ್ರೆಸ್​ನ ಅಸಮಾಧಾನಿತ ಶಾಸಕರು ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಪದೇಪದೆ ರಾಜೀನಾಮೆ ನೀಡುವುದಾಗಿ ಹೇಳ್ತಿದ್ರು. ಇದೀಗ ರಾಜೀನಾಮೆ ನೀಡಿರುವುದು ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಅಸಮಾಧಾನದಿಂದಾಗಿ ಅವರು ರಾಜೀನಾಮೆ ಕೊಟ್ಟಿದ್ದಾರೆ. ಅದು ಅವರ ಪಕ್ಷಕ್ಕೆ ಬಿಟ್ಟಿದ್ದು, ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.ಕಾಂಗ್ರೆಸ್​ನ ಹಿರಿಯ ನಾಯಕರಾದ ರಾಮಲಿಂಗ ರೆಡ್ಡಿ ಮತ್ತು ರೋಷನ್ ಬೇಗ್ ಅವರ ಅಸಮಾಧಾನ ಬಹಿರಂಗವಾಗಿದೆ. ಅವರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ನಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ. ಹೊಸದಾಗಿ ಬಂದವರಿಗೆ ಮಂತ್ರಿಸ್ಥಾನ ಕೊಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಪಕ್ಷದಲ್ಲಿ ಗೊಂದಲ ಮುಂದುವರೆದಿದೆ. ಅದೆಲ್ಲಾ ಅವರ ಪಕ್ಷದ ನಾಯಕರಿಗೆ ಬಿಟ್ಟ ವಿಚಾರ ಎಂದು ತಿಳಿಸಿದರು.

TRENDING