Saturday, December 5, 2020
Home ಜಿಲ್ಲೆ ಸರ್ಕಾರಿ ನೌಕರರ ವರ್ಗಾವಣೆಗೆ ಕೌನ್ಸಿಲಿಂಗ್ ವ್ಯವಸ್ಥೆ-ಸಚಿವ ಕೃಷ್ಣಭೈರೇಗೌಡ

ಇದೀಗ ಬಂದ ಸುದ್ದಿ

ದೇಶದಲ್ಲಿ ಒಂದೇ ದಿನದಲ್ಲಿ 36,652 ಕೊರೋನಾ ಪ್ರಕರಣ...

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,652 ಪ್ರಕರಣ ದಾಖಲಾಗಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ.

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಚಿನ್ನ ಕಳ್ಳ ಸಾಗಣೆ : ಕೇರಳ ಸಿಎಂ...

 ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸಿ.ಎಂ.ರವೀಂದ್ರನ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮೂರನೇ ಬಾರಿ ಸಮನ್ಸ್‌ ನೀಡಿದೆ. ರಾಜತಾಂತ್ರಿಕ ಮಾರ್ಗವನ್ನು...

Delhi Air Pollution: ಅತ್ಯಂತ ಕಳಪೆಯಾಗಿದೆ ರಾಷ್ಟ್ರ...

ನವದೆಹಲಿ(ಡಿ. 5): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 20 ದಿನವಾದರೂ...

ಕರ್ನಾಟಕ ಬಂದ್: ಬೆಂಗಳೂರಲ್ಲಿ 100ಕ್ಕೂ ಹೆಚ್ಚು ರೌಡಿಶೀಟರ್‌ಗಳನ್ನು...

ಬೆಂಗಳೂರು, ಡಿ. 05: ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ್ ಬಂದ್‌ಗೆ ಕರೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆವಹಿಸಲು 100ಕ್ಕೂ ಹೆಚ್ಚು ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸರ್ಕಾರಿ ನೌಕರರ ವರ್ಗಾವಣೆಗೆ ಕೌನ್ಸಿಲಿಂಗ್ ವ್ಯವಸ್ಥೆ-ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ರಾಜ್ಯಸರ್ಕಾರಿ ಗ್ರೂಪ್ ಸಿ ಮತ್ತು ಡಿ ದರ್ಜೆಯ ನೌಕರರ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಕೌನ್ಸಿಲಿಂಗ್ ವ್ಯವಸ್ಥೆ ಜಾರಿಗೊಳಿಸಲು ಕರಡು ಕಾನೂನಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಅವರು ಇಂದು ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.  ಗ್ರೂಪ್ ಸಿ ಮತ್ತು ಡಿ ದರ್ಜೆಯ ನೌಕರರು ವರ್ಗಾವಣೆ ಸಮಯದಲ್ಲಿ ಅನೇಕ ಅನಾನುಕೂಲತೆಗಳನ್ನು ಎದುರಿಸುತ್ತಿದ್ದಾರೆ. ಅದನ್ನು ನಿವಾರಿಸುವ ನಿಟ್ಟಿನಲ್ಲಿ ಕೌನ್ಸಿಲಿಂಗ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಇದರ ಮೂಲಕ ಇಡೀ ರಾಜ್ಯದಲ್ಲಿ ಜಿಲ್ಲಾವಾರು ಹಾಲಿ,ಖಾಲಿ ಇರುವ ಹುದ್ದೆಗಳ ಸಮಾನ ಹಂಚಿಕೆಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು. ವರ್ಗಾವಣೆ ಸಮಯದಲ್ಲಿ ವೃಂದವಾರು ಹಂಚಿಕೆ, ಕನಿಷ್ಠ ಸೇವಾವಧಿಯನ್ನು ಸಹ ಪರಿಗಣಿಸಲಾಗುತ್ತದೆ ಎಂದು ಅವರು ತಿಳಿಸಿದರು. ಈ ಸಂಬಂಧ ವಿಧೇಯಕವನ್ನು ಮುಂದಿನ ವಿಧಾನಮಂಡಲದಲ್ಲಿ ಮಂಡಿಸಲಾಗುತ್ತದೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದರು.

ಸಚಿವ ಸಂಪುಟ ಸಭೆಯ ಇತರ ಪ್ರಮುಖ ನಿರ್ಣಯಗಳು : ಸರ್ಕಾರಿ ರಜೆಗಳ ಪರಿಷ್ಕರಣೆಗೆ ಇಂದಿನ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಪ್ರತಿ 2ನೇ ಶನಿವಾರ ಮತ್ತು 4ನೇ ಶನಿವಾರ ರಜೆ ನೀಡಲಾಗುವುದು, ಬದಲಾಗಿ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ 15 ಸಾಂದರ್ಭಿಕ ರಜೆಯನ್ನು ಕಡಿತಗೊಳಿಸಿ 10ಕ್ಕೆ ಇಳಿಸಲಾಗುವುದು. ಆದರೆ ಯಾವುದೇ ಜಯಂತಿ ಅಥವಾ ಹಬ್ಬಗಳ ರಜೆಯನ್ನು ಕಡಿತ ಮಾಡುವುದಿಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದರು.

1998ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಗೊಂಡ ಕೆಎಎಸ್ ಅಧಿಕಾರಿಗಳ ಪರಿಷ್ಕೃತ ಆಯ್ಕೆ ಪಟ್ಟಿಯಿಂದ ಹಲವು ಅಧಿಕಾರಿಗಳಿಗೆ ಸೇವಾಭದ್ರತೆ ಸಿಗದೇ ಇರುವ ಕಾರಣದಿಂದ ಅವರಿಗೆ ಸೇವಾಭದ್ರತೆ ಒದಗಿಸಲು ಸರ್ಕಾರ “Karnataka Civil Services (Protection of Service of Persons appionted in pursuance to final selection list Pulished by Selection authority) Ordinance 2019” ಅನ್ನು ಜಾರಿಗೆ ತರಲು ಕಳೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ ಈ ಸುಗ್ರೀವಾಜ್ಞೆ ತರುವ ಸಂದರ್ಭದಲ್ಲಿ 1998ರ ನಂತರ ನೇಮಕಗೊಂಡ ಗೆಜೆಟೆಡ್ ಪ್ರೊಬೇಷನರ್ಸ್ ಅಧಿಕಾರಿಗಳ ಮುಂಬಡ್ತಿಗಾಗಲಿ,ಅವರ ಹಿತಾಸಕ್ತಿಗಾಗಲಿ ಧಕ್ಕೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಲು ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡದ ಆವರಣದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಒಳಗೊಂಡಂತೆ 104 ಕೋಟಿ ರೂ.ಗಳ ಕಾಮಗಾರಿ ಕೈಗೊಳ್ಳಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳ 126 ಕೆರೆಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಹರಿಸಿ ತುಂಬಿಸಲು ಈ ಹಿಂದೆ 1280 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಿತ್ತು. ಈ ಯೋಜನೆಯ 2ನೇ ಹಂತದಲ್ಲಿ 200 ರಿಂದ 250 ಕೆರೆಗಳಿಗೆ ನೀರು ಹರಿಸಿ ತುಂಬಿಸಲು 455 ಕೋಟಿ ರೂ.ಗಳ ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದರು.

ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಒಟ್ಟು 18,582 ನೀರು ಶುದ್ಧೀಕರಣ ಘಟಕಗಳ ಸ್ಥಾಪನೆ ಮಾಡಲಾಗಿದೆ. ಇದರಲ್ಲಿ 16,000 ಕುಡಿಯುವ ನೀರು ಘಟಕಗಳ ನಿರ್ವಹಣಾ ಅವಧಿ ಮುಗಿದಿದೆ. ಇವುಗಳ ಸಮರ್ಪಕ ನಿರ್ವಹಣೆಗಾಗಿ ಇನ್ನು ಮುಂದೆ ಪ್ರತಿ ತಾಲ್ಲೂಕಿಗೆ ಒಂದರಂತೆ ನಿರ್ವಹಣಾ ಪ್ಯಾಕೇಜ್‍ನ್ನು ಟೆಂಡರ್ ಮೂಲಕ ಅರ್ಹ ಸಂಸ್ಥೆಗಳಿಗೆ ಒದಗಿಸಲು ಗ್ರಾಮ ಪಂಚಾಯತ್‍ಗೆ ಅಧಿಕಾರ ನೀಡಲು ನಿರ್ಧರಿಸಲಾಗಿದೆ. ಗ್ರಾಮ ಪಂಚಾಯತ್‍ಗಳೇ ನಿರ್ವಹಣೆ ಮಾಡಲು ನಿರ್ಧರಿಸಿದಲ್ಲಿ ಅದಕ್ಕೂ ಅವಕಾಶ ನೀಡಲಾಗುತ್ತದೆ. ಒಂದು ತಾಲ್ಲೂಕಿನ 100ಕ್ಕಿಂತ ಹೆಚ್ಚು ಘಟಕಗಳಿದ್ದಲ್ಲಿ ಹೆಚ್ಚುವರಿ ಪ್ಯಾಕೇಜ್ ಸಹ ನೀಡಲಾಗುತ್ತದೆ. ಪ್ರಸ್ತುತ ಪ್ರತಿ ಲೀಟರ್‍ಗೆ 10 ಪೈಸೆ ದರದಂತೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ಆದರೆ ನಿರ್ವಹಣಾ ವೆಚ್ಚ 25 ಪೈಸೆ ಆಗುತ್ತಿದೆ, ಇದನ್ನು ಸರಿದೂಗಿಸಲು ಕಾಲಕಾಲಕ್ಕೆ ಪ್ರತಿ ಲೀಟರ್‍ಗೆ 25 ಪೈಸೆ ಏರಿಕೆ ಮಾಡಲು ಮತ್ತು 5 ವರ್ಷಗಳ ಕಾಲ ನಿರ್ವಹಣೆ ಮತ್ತು ಕಾರ್ಯಾಚರಣೆ ನಿಗದಿಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ರಾಜ್ಯದ ಗ್ರಾಮೀಣ ಜನ ವಸತಿಗಳಲ್ಲಿ ಅನುಷ್ಠಾನಗೊಳಿಸಿರುವ ನೀರು ಶುದ್ಧೀಕರಣ ಘಟಕಗಳ ಪೈಕಿ ನಾಣ್ಯದ ಬೂತ್ ಇರುವ ಕಡೆ ನಾನಾ ರೀತಿಯ ವ್ಯವಸ್ಥೆಗಳಿಗೆ ಹಾಗೂ ತಾಂತ್ರಿಕ ದೋಷಗಳು ಎದುರಾಗುತ್ತಿದೆ. ಆದ್ದರಿಂದ ನಾಣ್ಯಗಳ ಬೂತ್‍ಗಳ ಬದಲಾಗಿ ಸ್ಮಾರ್ಟ್‍ಕಾರ್ಡ್ ಬೂತ್‍ಗಳನ್ನು ಒಳವಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಎಲ್ಲಾ ಕಾರ್ಯಗಳಿಗಾಗಿ 5 ವರ್ಷಗಳ ಅವಧಿಗೆ 223.73 ಕೋಟಿ ರೂ.ಗಳನ್ನು ಒದಗಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದರು.

ಉನ್ನತ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪನ್ಯಾಸಕರನ್ನು ಕೋರ್ಟ್ ಆದೇಶದ ಮೇರೆಗೆ ಖಾಯಂಗೊಳಿಸಲಾಗಿತ್ತು. ಇವರಿಗೆ ಸೇವಾ ನಿವೃತ್ತಿಯ ನಂತರ ಪಿಂಚಣಿ ನೀಡಲು ಇಂದಿನ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದರು.

TRENDING