Sunday, May 16, 2021
Homeಅಂತರ್ ರಾಷ್ಟ್ರೀಯದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರಿಗೆ ಉಪಮುಖ್ಯಮಂತ್ರಿ ಹುದ್ದೆ ..!

ಇದೀಗ ಬಂದ ಸುದ್ದಿ

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರಿಗೆ ಉಪಮುಖ್ಯಮಂತ್ರಿ ಹುದ್ದೆ ..!

ಅಮರಾವತಿ: ಆಂಧ್ರಪ್ರದೇಶದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಮುಂದಾಗಿದೆ.

ಎಲ್ಲಾ ಸಮುದಾಯಗಳನ್ನು ಗಮನದಲ್ಲಿರಿಸಿಕೊಂಡು ಅದರಲ್ಲೂ ಶೋಷಿತ ಸಮುದಾಯದಿಂದ ಆಯ್ಕೆಯಾಗಿರುವ ಶಾಸಕರನ್ನು ಸಚಿವರನ್ನಾಗಿ ಮಾಡಿ ಅವರಿಗೆ ಡಿಸಿಎಂ ಸ್ಥಾನ ನೀಡಲು ಕ್ರಾಂತಿಕಾರಿ ಹೆಜ್ಜೆಯನ್ನು ಮುಂದಿಡಲಾಗಿದೆ.

ಈಗಾಗಲೇ ರಾಜ್ಯದಲ್ಲಿ ಕಡಿಮೆ ದರದಲ್ಲಿ ವಿದ್ಯುತ್ ಪೂರೈಕೆ ಎಲ್ಲರಿಗೂ ಮನೆ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಜಾರಿಗೆ ತರಲು ಜಗನ್ ಈಗಾಗಲೇ ಸಂಪನ್ಮೂಲ ಕ್ರೂಢೀಕರಣಕ್ಕೆ ಮುಂದಾಗಿದ್ದಾರೆ.

ದೇಶದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಬಗ್ಗೆ ಅಂದಾಜು ಮಾಡಿದ್ದ ಜಗನ್, ತಮ್ಮ ಪಕ್ಷ ಪ್ರಮುಖ ಪಾತ್ರ ವಹಿಸಲಿದೆ ಎಂದು ನಿರೀಕ್ಷಿಸಿದ್ದರು. ಆದರೆ ಬಿಜೆಪಿ ಭಾರೀ ಬಹುಮತದಿಂದ ಆಯ್ಕೆಯಾಗಿರುವುದರಿಂದ ಇವರ ಮಾತಿಗೆ ಎಷ್ಟು ಕಿಮ್ಮತ್ತು ಸಿಗುತ್ತದೆ ಎಂಬುದು ಈಗ ಯಕ್ಷ ಪ್ರಶ್ನೆಯಾಗಿದೆ.

ಆದರೂ ಈಗಾಗಲೇ ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಿ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಕೋರಿ ನೆರವನ್ನು ಪಡೆದಿದ್ದಾರೆ.

ದು ಸಿಗುವುದು ವಿಳಂಬವಾದರೆ ಜನರ ವಿಶ್ವಾಸವನ್ನು ಹಾಗೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ/ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಹಾಗೂ ಕಾಪು ಸಮುದಾಯದ ಮುಖಂಡರನ್ನು ಉಪಮುಖ್ಯಮಂತ್ರಿ ಮಾಡುವ ಹೊಸ ಅಸ್ತ್ರವನ್ನು ಪ್ರಯೋಗಿಸುತ್ತಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img