Saturday, July 31, 2021
Homeಕ್ರೈಂ ನ್ಯೂಸ್ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ಬಂಧನ

ಇದೀಗ ಬಂದ ಸುದ್ದಿ

ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ಬಂಧನ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಳೆದ ಶುಕ್ರವಾರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಎರಡೂ ಗುಂಪಿನ ಕೆಲ ಯುವಕರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಘಟನೆಯ ಮಾಹಿತಿಯ ಬಗ್ಗೆ ಪಡೆದು ಇಂದು ಬೆಳಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎಂ.ಎನ್.ನಾಗರಾಜ ಸಣ್ಣ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಘಟನೆ ನಡೆದಿದ್ದು ಕ್ಷುಲ್ಲಕ ಕಾರಣಕ್ಕೆ ಒಂದು ಗುಂಪಿನ ಯುವಕರು ಇನ್ನೊಂದು ಗುಂಪಿನ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಸಂಬಂಧವಾಗಿ 4 ಜನ ಆರೋಪಿಗಳನ್ನು ಬಂಧಿಸಲಾಗಿದೆ,ಆದರೆ ಇನ್ನೂ ರೌಡಿಶೀಟರ್ ಗಳು ಪರಾರಿಯಾಗಿದ್ದು ಅವರ ಬಂಧನಕ್ಕೆ ಜಾಲವನ್ನು ಬೀಸಲಾಗಿದೆ. ಈ ಸಂಬಂಧವಾಗಿ ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img