Wednesday, December 2, 2020
Home ಜಿಲ್ಲೆ ಗಾಣಿಗ ಸಮಾಜದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಗಾಣಿಗ ಸಮಾಜದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ

ಬಾಗಲಕೋಟ : ಜಿಲ್ಲೆಯ ಜಮಖಂಡಿ ನಗರದ ಕಾಡಸಿದ್ದೇಶ್ವರ ಮಂಗಲ ಭವನದಲ್ಲಿ ಇಂದು ಜಮಖಂಡಿ ತಾಲ್ಲೂಕು ಗಾಣಿಗ ಸಮಾಜ ಹಾಗೂ ಜಮಖಂಡಿ ತಾಲ್ಲೂಕು ಗಾಣಿಗ ನೌಕರರ ಸಂಘ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು.

ಈ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಪರಮಪೂಜ್ಯ ಶ್ರೀಸಿದ್ಧಮುತ್ಯಾ ಶ್ರೀಗಳು,ಸಿದ್ಧಕ್ಷೇತ್ರ ಜಮಖಂಡಿ ವಹಿಸಿದ್ದರು. ಆನಂದ ಸಿದ್ದು ನ್ಯಾಮಗೌಡ ಆವರಿಂದ ಕಾರ್ಯಕ್ರಮದ ಉದ್ಘಾಟನೆ ಜರುಗಿತು. ಜಮಖಂಡಿಯ ಗಿರಮಲ್ಲೇಶ್ವರ ಆಶ್ರಮದ ಸದ್ಗುರು ಸಮರ್ಥ ಶ್ರೀ ಗುರುಸಿದ್ಧ ಮಹಾರಾಜರು ಸಹ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಕೆ.ತುಪ್ಪದ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿ.ಎಸ್‌.ನ್ಯಾಮಗೌಡ,ನಾಗಪ್ಪ ಬಸಪ್ಪ ಮುತ್ತಕ್ಕನವರ,ನಂದೆಪ್ಪಾ ತುಪ್ಪದ,ಹನುಮಂತ ಮರನೂರ,ಸಂಗಮೇಶ ಗಾಣಿಗೆರ ಉಪಸ್ಥಿತರಿದ್ದರು.

ಜಮಖಂಡಿ ತಾಲ್ಲೂಕಿನ ಗಾಣಿಗ ಸಮಾಜದ ಅಧ್ಯಕ್ಷರು ಹಾಗೂ ನಿವೃತ್ತ ಶಿಕ್ಷಕರೂ ಆಗಿರುವ ಕೆ.ಕೆ.ತುಪ್ಪದ ಅವರು ಮಾತನಾಡಿ  ನಮ್ಮ ತಾಲ್ಲೂಕಿನ ಗಾಣಿಗ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸತತ 9 ವರ್ಷಗಳಿಂದ ನಡೆಸಿಕೊಂಡು ಬಂದಿದ್ದೇವೆ,ಪ್ರತಿವರ್ಷ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ,ಇದನ್ನು ನಾವು ಮಕ್ಕಳಿಗೆ ಪ್ರೋತ್ಸಾಹ ಎಂದು ತಿಳಿದುಕೊಂಡು ಮಾಡುತ್ತಿದ್ದೇವೆ. ನಮ್ಮಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳ ಪೈಕಿ ಶೇಕಡಾ 98ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ,ಇದನ್ನು ನಾವು ಇನ್ನೂ ಮುಂದುವರೆಸಿಕೊಂಡು ಹೋಗುತ್ತೇವೆ ಎಂದರು.

ಹಿರಿಯ ಮಹಿಳಾ ನಾಯಕಿ ಜಯಶ್ರೀ ಗಾಣಿಗೆರ ಅವರು ಮಾತನಾಡಿ ಗಾಣಿಗ ಸಮಾಜವು ಸ್ವಲ್ಪ ಹಿಂದೆ ಇತ್ತು,ಆದಕಾರಣ ನಾವು ಕೂಡ ಕಡಿಮೆ ಅಲ್ಲ ಎಂದು ಮಹಿಳೆಯರು ಮುಂದೆ ಬರೋಣ ಎಂದು ಈ ಸಾರಿ ಹೊಸದಾಗಿ ಮಹಿಳಾ ಸಂಘವನ್ನು ಸ್ಥಾಪನೆ ಮಾಡಿಕೊಂಡು ಪಠ್ಯೇತರ ಚಟುವಟಿಕೆಗಳಲ್ಲಿ ಮತ್ತು ಅಡುಗೆ ಮನೆಗಷ್ಟೇ ಸೀಮಿತವಲ್ಲದೆ‌ ಎಲ್ಲಾ ತರಹದ ಚಟುವಟಿಕೆಗಳಲ್ಲಿ ಭಾಗವಹಿಸುತ್ತೇವೆ ಮತ್ತು ನಾವು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇವೆ ಹಾಗೂ ಎಲ್ಲಾ ಕಾರ್ಯಕ್ರಮದಲ್ಲಿ ಮುಂದುಬರಬೇಕೆಂದು ನಮ್ಮ ಹಿರಿಯರು ಪ್ರೋತ್ಸಾಹ ನೀಡಿದ್ದಾರೆ,9 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬಂದಿರುವ ಈ ಕಾರ್ಯಕ್ರಮ ಮುಂದುವರೆಯಲಿ ಎಂದು ಕರೆಕೊಟ್ಟರು.

TRENDING