Thursday, November 26, 2020
Home ಜಿಲ್ಲೆ ಕೋಲಾರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರ ಪ್ರತಿಭಟನೆ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರ ಪ್ರತಿಭಟನೆ

ಕೋಲಾರ : ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಇಂದು ರಾಷ್ಟ್ರೀಯ ಹೆದ್ದಾರಿಗಳ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೋಲಾರದಲ್ಲೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಕೋಡಿಹಳ್ಳಿ ಚಂದ್ರಶೇಖರ್ ಸ್ಥಾಪಿತ ರೈತ ಸಂಘ ಹಾಗೂ ಹರಿಸು ಸೇನೆ ಸಂಘಟನೆಯ ನೇತೃತ್ವದಲ್ಲಿ ರಾಷ್ಟ್ರಿಯ ಹೆದ್ದಾರಿ ಬಂದ್ ನಡೆಸುವ ಮೂಲಕ‌ ಪ್ರತಿಭಟನೆ ನಡೆಸಲಾಯಿತು. ಕೋಲಾರ ರಾಷ್ಟೀಯ ಹೆದ್ದಾರಿ ಕೊಂಡರಾಜಹಳ್ಳಿ ಗೇಟ್ ಬಳಿ ರೈತ ಸಂಘಟನೆ ಹಾಗೂ ವಿವಿಧ ರೈತ ಪರ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ಚಳುವಳಿ ನಡೆಸಿ ಭೂ ಸ್ವಾಧೀನ ಕಾಯ್ದೆ ತಿದ್ದುಪಡಿಯನ್ನು ಬದಲಾಯಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ರು.

ರೈತರ ಒಪ್ಪಿಗೆ ಇಲ್ಲದೆ ಜಮೀನು ವಶಕ್ಕೆ ಪಡೆಯಬಾರದು,ಸ್ವಾಧೀನಪಡಿಸಿಕೊಂಡ ಜಮೀನಿಗೆ ನಾಲ್ಕು ಪಟ್ಟು ದರವನ್ನು ಪರಿಹಾರವನ್ನಾಗಿ ಕೊಡಬೇಕು ಹಾಗೂ ಜಮೀನು ಕಳೆದುಕೊಂಡ ರೈತರಿಗೆ ಪುನರ್ವಸತಿ ಕಲ್ಪಿಸಬೇಕೆಂಬ ನಿಯಮ ಸಡಿಲಸಿ ಏಕಗಂಟಿನ ಪರಿಹಾರ ಯೋಜನೆ ಮುಂದಾಗಿರುವ ಸರ್ಕಾರಗಳ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಈ ಹೊಸ ಉದ್ದೇಶಿತ ತಿದ್ದುಪಡಿ ರೈತರ ಪಾಲಿಗೆ ಮರಣ ಶಾಸನವಾಗಲಿದೆ. ಇನ್ನು ಕಳೆದ ಫೆ.6ರಿಂದ 13 ರವರೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಯಾವುದೇ ಚರ್ಚೆ ಮಾಡದೆ ರೈತರ ಸಲಹೆ ಸೂಚನೆ ಪಡೆಯದೆ ಸರ್ಕಾರ ಮಸೂದೆ ಅಂಗೀಕಾರ ಪಡೆದಿದೆ. ಸರ್ಕಾರದ ತಪ್ಪು ನಿರ್ಧಾರ ವಿರೋಧಿಸಬೇಕಿದ್ದ ವಿರೋಧ ಪಕ್ಷವೂ ಮುಖ್ಯಮಂತ್ರಿ ಗದ್ದುಗೆಗಾಗಿ ಬೇರೆ ಹೋರಾಟದಲ್ಲಿ ಮಗ್ನವಾಗಿದೆ. ಹೀಗಾದರೆ ಅನಕ್ಷರಸ್ಥ ರೈತರು ಜೀವನ ನಡೆಸುವುದು ಹೇಗೆ? ಎಂದು ಪ್ರಶ್ನಿಸಿದರು.

ರಾಜ್ಯದ ಆಹಾರ ಭದ್ರತೆ ಹಾಗೂ ಸ್ವಾವಲಂಬನೆ ಮೇಲಾಗುವ ದುಷ್ಪರಿಣಾಮ ಪರಿಗಣಿಸದೆ ಏಕಾಏಕಿ ನಿರ್ಧಾರ ಕೈಗೊಂಡಿರುವುದು ಖಂಡನೀಯ. ಕೇಂದ್ರಸರ್ಕಾರ ಸಹ 3 ಬಾರಿ ಸುಗ್ರೀವಾಜ್ಞೆ ಮೂಲಕ ಭೂ ಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಯತ್ನಿಸಿದೆ. ರೈತ ವಿರೋಧಿ ನಿಲುವು ತಳೆಯಲು ಯಾವ ಸರ್ಕಾರಕ್ಕೂ ಅವಕಾಶ ಮಾಡಿಕೊಡುವುದಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.

ಇದೇ ವೇಳೆ ಭೂ ಸ್ವಾಧೀನ ತಿದ್ದುಪಡಿ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಬಾರದು ಎಂದು ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದರು. ಹೆದ್ದಾರಿ ತಡೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಿಲೋಮೀಟರ್ ಗಟ್ಟಲೆ ವಾಹನ ಸಾಲು ಸಾಲು   ನಿಂತಿದ್ದರಿಂದ ಬೇರೆ ಊರುಗಳಿಗೆ ತೆರಳುವ ವಾಹನ ಸವಾರರು ಪರದಾಡುತ್ತಿದ್ದ ಪರಿಸ್ಥಿತಿ ಸರ್ವೆಸಾಮಾನ್ಯವಾಗಿತ್ತು. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಬಿಗಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಹೋರಾಟಗಾರರನ್ನು ಬಲವಂತವಾಗಿ ವಶಕ್ಕೆ ಪಡೆದು ಪೊಲೀಸ್ ಜೀಪ್ ಗಳ‌ ಮೂಲಕ ಪೊಲೀಸರು ಕರೆದೊಯ್ದರು.

TRENDING