Friday, November 27, 2020
Home ಜಿಲ್ಲೆ ಉಗಾರ ಬ್ಯಾರೇಜ್ ತಲುಪಿದ ಮಹಾರಾಷ್ಟ್ರದ ರಾಜಾಪುರ ಡ್ಯಾಂ ನೀರು

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಉಗಾರ ಬ್ಯಾರೇಜ್ ತಲುಪಿದ ಮಹಾರಾಷ್ಟ್ರದ ರಾಜಾಪುರ ಡ್ಯಾಂ ನೀರು

ಕಾಗವಾಡ : ಬೇಸಿಗೆ ಬಿಸಿಲ ಝಳದಿಂದ ಬತ್ತಿ ಬೆಂಡಾಗಿದ್ದ ಚಿಕ್ಕೋಡಿ ತಾಲ್ಲೂಕಿನ ಉಗಾರ ಬ್ಯಾರೇಜ್ ಗೆ ಮಹಾರಾಷ್ಟ್ರದ ರಾಜಾಪುರ ಡ್ಯಾಂ ನೀರು ತಲುಪಿದೆ.

ನೀರು ನೋಡುತ್ತಲೇ ರೈತರು ಸಂತಸದಿಂದ ಕುಣಿದು ಕುಪ್ಪಳಿಸಿದರು. ನೀರನ್ನು ನೋಡಿ ಎಷ್ಟೋ ದಿನಗಳಾಗಿದ್ದವು ಎಂದು ಉದ್ಗರಿಸಿದ ಜನರು ಬಾಯಾರಿದಂತೆ ಹರಿದು ಬಂದ ನೀರನ್ನು ನೋಡಿ ಖುಷಿಪಟ್ಟರು. ಮಹಾರಾಷ್ಟ್ರದ ರಾಜಾಪುರ ಜಲಾಶಯದಿಂದ ಬಿಟ್ಟ ನೀರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕು ದಾಟಿ ಕಾಗವಾಡ ತಾಲೂಕಿನ ಮೊಳವಾಡ,ಕುಸನಾಳ ಗ್ರಾಮಗಳಿಗೆ ಹರಿದು ಸೋಮವಾರ ಉಗಾರ ಬ್ಯಾರೇಜ್ ತಲುಪಿದಾಗ ಜನತೆಯ ಸಂತಸಕ್ಕೆ ಪಾರವೇ ಇರಲಿಲ್ಲ.

ನೀರು ಹರಿದು ಬಂದದ್ದನ್ನು ನೋಡಲು ನೂರಾರು ಜನರು ಬ್ಯಾರೇಜ್ ಬಳಿ ಸೇರಿದ್ದರು. ನೀರು ನೋಡಿ ಎಷ್ಟೋ ದಿನಗಳಾದವೆಂಬ ಭಾವನೆ ಅವರಲ್ಲಿ ತುಂಬಿ ತುಳುಕುತ್ತಿತ್ತು. ಕಾಗವಾಡ ತಾಲೂಕಿನ ಉಗಾರ ಬಿ.ಕೆ. ಮತ್ತು ಉಗಾರ ಕೆ.ಎಚ್. ಜನತೆಗೆ ನೀರು ಸಿಕ್ಕಂತಾಗಿದ್ದು ಸೋಮವಾರ ರಾತ್ರಿ ರಾಯಬಾಗ ತಾಲೂಕಿನ ಕುಡಚಿಯನ್ನು ನೀರು ತಲುಪಿದೆ.

ಕೃಷ್ಣಾ ನದಿಯ ಬಲಭಾಗಕ್ಕೆ ರಾಯಬಾಗ ತಾಲೂಕಿನ ಮತ್ತು ಎಡಭಾಗಕ್ಕೆ ಅಥಣಿ ತಾಲೂಕಿನ ಹಳ್ಳಿಗಳಿದ್ದು, ರಾಜಾಪುರ ಜಲಾಶಯದಿಂದ ಮತ್ತಷ್ಟು ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹೆಚ್ಚಿನ ನೀರು ಬಿಟ್ಟಲ್ಲಿ ಅಥಣಿ ಮತ್ತು ರಾಯಬಾಗ ತಾಲೂಕುಗಳ ಅನೇಕ ಗ್ರಾಮಗಳಿಗೆ ಒಂದೆರಡು ದಿನಗಳಲ್ಲಿ ನೀರು ತಲುಪಲಿದೆ.

ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೊಯ್ನಾ ಅಥವಾ ವಾರ್ಣಾ ಜಲಾಶಯದಿಂದ ನೀರು ಬಿಡುಗಡೆ ಮಾಡಿಸಲು ರಾಜ್ಯಸರಕಾರ ನಡೆಸಿದ ಎಲ್ಲಾ ಪ್ರಯತ್ನಗಳೂ ವಿಫಲವಾಗಿವೆ. ಆದರೆ, ಮಹಾರಾಷ್ಟ್ರದ ಶಿರೋಳ ಶಾಸಕರ ಪ್ರಯತ್ನದಿಂದಾಗಿ ಈ ಹಿಂದೆ ರಾಜಾಪುರ ಡ್ಯಾಂನಿಂದ ನೀರು ಬಿಡುಗಡೆಯಾಗಿತ್ತು. ಇತ್ತೀಚೆಗೆ ಈ ಶಾಸಕರನ್ನು ಕಾಗವಾಡ ತಾಲೂಕಿನ ಶಿರಗುಪ್ಪಿಯಲ್ಲಿ ಕನ್ನಡ ಮತ್ತು ಮರಾಠಿ ಗ್ರಾಮಸ್ಥರು ಸೇರಿಯೇ ಸನ್ಮಾನಿಸಿದ್ದಾರೆ.

ಕಳೆದ 2 ತಿಂಗಳಿಂದ ಚಿಕ್ಕೋಡಿ,ಕಾಗವಾಡ,ಅಥಣಿ ಮತ್ತು ರಾಯಬಾಗ ತಾಲೂಕುಗಳ ಜನರು ನೀರಿನ ಅಭಾವದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು ಜನರು ಸ್ವಲ್ಪ ಮಟ್ಟಿಗೆ ಸಂತೋಷದಾಯಕರಾಗಿದ್ದಾರೆ.

TRENDING