Friday, November 27, 2020
Home ಜಿಲ್ಲೆ ಕೋಲಾರ ಕೋಲಾರ : ಹರಟಿ ಗ್ರಾಮದ ಬಗ್ಗೆ ಬೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಕೋಲಾರ : ಹರಟಿ ಗ್ರಾಮದ ಬಗ್ಗೆ ಬೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ

ಕೋಲಾರ : ಸಿಎಂ ಕುಮಾರಸ್ವಾಮಿ ಅವರೇ ಕೋಲಾರ ಜಿಲ್ಲೆಯ ರೈತರ ಬವಣೆ ಒಮ್ಮೆ ನೋಡಬೇಕಿದೆ.

ಕೋಲಾರ ತಾಲ್ಲೂಕಿನ ಹರಟಿ ಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆ ಸುರಿದ ಭಾರಿ ಬಿರುಗಾಳಿ ಸಹಿತ ಮಳೆಗೆ ಗ್ರಾಮದಲ್ಲಿರುವ ರೈತರ ಜಮೀನುಗಳಲ್ಲಿ 10 ಕ್ಕೂ ಹೆಚ್ಚು ಕಡೆ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ವಿದ್ಯುತ್​ ಕಂಬಗಳು ನೆಲಕ್ಕೆ ಉರುಳಿ 15 ದಿನಗಳಾದರೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡದೆ ಉದಾಸೀನ ತೋರುತ್ತಿದ್ದಾರೆ.

ರೈತರು ಬೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಪ್ರತಿದಿನ ಸುದ್ದಿ ಮುಟ್ಟಿಸುತ್ತಿದ್ದರೂ ಇತ್ತ ಕಡೆ ತಲೆ ಹಾಕದೇ ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನು 10 ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಬಿದ್ದ ಹಿನ್ನೆಲೆಯಲ್ಲಿ ಸುಮಾರು 15 ಕ್ಕೂ ಹೆಚ್ಚು ರೈತರ ಜಮೀನುಗಳಲ್ಲಿ ವಿದ್ಯುತ್‌ ಲೈನ್ ಹಾದು ಹೋಗಿದೆ. ಇತ್ತ ಕರೆಂಟ್ ಇಲ್ಲದೇ ಬೆಳೆಗಳು ಒಣಗಿಹೋಗಿವೆ. ಮತ್ತೊಂದೆಡೆ ಪ್ರತಿನಿತ್ಯ ಇದೇ ಜಮೀನಿನಲ್ಲಿ ರೈತರು ಓಡಾಡುತ್ತಾರೆ ಜಮೀನಿನಲ್ಲಿ ಬಿದ್ದಿರುವ ಲೈನ್ ತಂತಿಯಲ್ಲಿ ಆಕಸ್ಮಾತ್ ವಿದ್ಯುತ್ ಹರಿದು ಯಾವಾಗ ಏನಾಗುತ್ತದೆ ಎಂಬ ಆತಂಕದಲ್ಲಿ ರೈತರು ಜೀವನ ನಡೆಸುತ್ತಿದ್ದಾರೆ. ರೈತರು ಬೆಳೆದ ಟೊಮ್ಯಾಟೊ,ಆಲೂಗಡ್ಡೆ,ಸೋರೆಕಾಯಿ,ಜೋಳ ಸೇರಿದಂತೆ ಇನ್ನಿತರ ಬೆಳೆಗಳು ಒಣಗಿ ಹೋಗಿವೆ. ಗ್ರಾಮದ ಶಿವಶಂಕರಪ್ಪ ಎಂಬ ರೈತನ ಲಕ್ಷಾಂತರ ಮೌಲ್ಯದ ಬೆಳೆಗಳು ನಾಶವಾಗಿದೆ. ತಮ್ಮ ಜಮೀನಿನಲ್ಲಿ ಬೆಳೆದಿದ್ದ ಟೊಮ್ಯಾಟೊ ಬೆಳೆ ನೀರಿಲ್ಲದೇ ಒಣಗಿ ಹೋಗಿದೆ. ಮಾರುಕಟ್ಟೆಯಲ್ಲಿ ಟೊಮ್ಯಾಟೊ ಬೆಳೆಗೆ ಉತ್ತಮ ಬೆಲೆ ಸಿಗುತ್ತಿದೆ. ಇನ್ನೇನು ಗಿಡದಲ್ಲಿ ಕಾಯಿಬಿಟ್ಟು ಹಣ್ಣಾಗುವ ಸಮಯದಲ್ಲಿಯೇ ನೀರು ಹಾಯಿಸಲು ಸಾಧ್ಯವಾಗದೇ ಟೊಮ್ಯಾಟೊ ಬೆಳೆ ಒಣಗಿಹೋಗಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಇನ್ನು ಗ್ರಾಮದ ಶಿವಣ್ಣ,ಮುನಿಸ್ವಾಮಿ,ಹನುಮಪ್ಪ ಹಾಗೂ ವೆಂಕಟೇಶ್​ ಎಂಬ ರೈತರು ಬೆಳೆದಿದ್ದ ಆಲೂಗಡ್ಡೆ,ಜೋಳ,ಸೋರೆಕಾಯಿ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ.

ರೈತರು ಅನೇಕ ಬಾರಿ ಬೆಸ್ಕಾಂ ಇಲಾಖೆ ಸಿಬ್ಬಂದಿಗೆ ವಿದ್ಯುತ್ ಕಂಬಗಳನ್ನ ದುರಸ್ತಿ ಮಾಡಿಕೊಡುವಂತೆ ಮನವಿ ಮಾಡಿದ್ದರೂ ಬೆಸ್ಕಾಂ ಇಲಾಖೆ ಮೌನವಹಿಸಿರುವುದು ನೋಡಿದ್ರೆ ವಿದ್ಯುತ್ ಕಂಬಗಳನ್ನ ದುರಸ್ತಿ ಮಾಡಲು ಬೆಸ್ಕಾಂ ಇಲಾಖೆ ಅಧಿಕಾರಿಗಳು ಲಂಚಕ್ಕಾಗಿ ಕಾಯುತ್ತಿದ್ದಾರೆ ಎಂಬ ಅನುಮಾನ ಮೂಡುತ್ತಿದೆ ಎಂದು ರೈತರು ಆಕ್ರೋಶವ್ಯಕ್ತಪಡಿಸಿದರು.

TRENDING