Sunday, May 16, 2021
Homeಜಿಲ್ಲೆಬೆಳಗಾವಿ : ಉಗಾರ ಖುರ್ದ ಪಟ್ಟಣದಲ್ಲಿ ಟ್ರಾಫಿಕ್ ಕಿರಿಕಿರಿ : ಕ್ಯಾರೆ ಅನ್ನದ ಅಧಿಕಾರಿಗಳು

ಇದೀಗ ಬಂದ ಸುದ್ದಿ

ಬೆಳಗಾವಿ : ಉಗಾರ ಖುರ್ದ ಪಟ್ಟಣದಲ್ಲಿ ಟ್ರಾಫಿಕ್ ಕಿರಿಕಿರಿ : ಕ್ಯಾರೆ ಅನ್ನದ ಅಧಿಕಾರಿಗಳು

ಕಾಗವಾಡ : ತಾಲೂಕಿನ ಉಗಾರ ಖುರ್ದ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ಹಲವು ಮುಖ್ಯ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆಯಾಗುತ್ತಿದ್ದು ಸಾರ್ವಜನಿಕರಿಗೆ ಭಾರೀ ಕಿರಿಕಿರಿಯಾಗುತ್ತಿದ್ದರೂ ಇದರ ಬಗ್ಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ರಸ್ತೆ ಬದಿಯ ಅಂಗಡಿಗಳ ವ್ಯಾಪಾರಸ್ಥರು ಪಟ್ಟಣ ಪಂಚಾಯತ್ ಜಾಗವನ್ನು ಒತ್ತುವರಿ ಮಾಡಿ ತಮ್ಮ ಅಂಗಡಿಯ ಬೋರ್ಡುಗಳನ್ನು ಸಾರ್ವಜನಿಕ ಪಾದಚಾರಿ ರಸ್ತೆಗಳಲ್ಲಿ ಅಳವಡಿಸಿರುವುದು ಇಕ್ಕಟ್ಟಿಗೆ ಕಾರಣವಾಗಿದೆ. ಅಲ್ಲದೇ ರಸ್ತೆ ಬದಿಯಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರಿಗೆ ತಿರುಗಾಡಲು ಬಹಳ ದುಸ್ತರವಾಗಿದೆ. ಇದನ್ನು ಗಮನಿಸದ ಪಟ್ಟಣ ಪಂಚಾಯತ್ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.

ಇನ್ನಾದರೂ ಸಂಬಂಧ ಪಟ್ಟವರು ಎಚ್ಚೆತ್ತು ಅತಿಕ್ರಮಣ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಾರಾ ಎಂದು ಕಾದುನೋಡಬೇಕಿದೆ.

-ಸಚೀನ ಕಾಂಬಳೆ, ದಿ ನ್ಯೂಸ್24 ಕನ್ನಡ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img