Sunday, May 16, 2021
Homeದೆಹಲಿದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ನಿಧನ

ಇದೀಗ ಬಂದ ಸುದ್ದಿ

ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ನಿಧನ

ದೆಹಲಿ : ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾದೀಕ್ಷಿತ್(81) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶೀಲಾದೀಕ್ಷಿತ್ ಅವರು ಇಂದು ದೆಹಲಿಯ ಎಸ್ಕಾರ್ಟ್ಸ್ ಆಸ್ಪತ್ರೆಯಲ್ಲಿ ನಿಧನ‌ ಹೊಂದಿದ್ದಾರೆ.

ಮಾಜಿ ಸಿಎಂ ಶೀಲಾದೀಕ್ಷಿತ್ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಬೈಪಾಸ್ ಸರ್ಜರಿ ಸಹ ಆಗಿತ್ತು ಎನ್ನಲಾಗಿದೆ. ಇಂದು ಬೆಳೆಗ್ಗೆ ವಾಂತಿ ಮಾಡಿಕೊಂಡ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಾಜಿ ಸಿಎಂ ಕೊನೆಯುಸಿರೆಳೆದಿದ್ದಾರೆ.

ಕಳೆದ ಮೂವತ್ತೈದು ವರ್ಷಗಳ ಸುಧೀರ್ಘ ರಾಜಕೀಯದಲ್ಲಿದ್ದ ಶೀಲಾದೀಕ್ಷಿತ್ ಅವರು 1998 ರಿಂದ 2013 ರವರೆಗೆ ಸತತ ಮೂರು ಬಾರಿ ಒಟ್ಟು ಹದಿನೈದು ವರ್ಷಗಳ ಕಾಲ ದೆಹಲಿಯ ಮುಖ್ಯಮಂತ್ರಿಯಾಗಿದ್ದರು.

ಕಳೆದ ಎರಡ್ಮೂರು ದಿನಗಳ ಹಿಂದೆಯೂ ಪಕ್ಷದ ಸಂಘಟನೆ ಕಾರ್ಯದಲ್ಲಿ ತೊಡಗಿದ್ದರು ಎನ್ನಲಾಗಿದ್ದು ಈ ಕುರಿತು ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟವಾಗಿವೆ. ಇವರು ತಮ್ಮ ಜೀವಿತಾವಧಿಯಲ್ಲಿ ಹಾಗೂ ಅಧಿಕಾರಾವಧಿಯಲ್ಲಿ ದೆಹಲಿಯ ಅಭಿವೃದ್ಧಿಗಾಗಿ ಸಾಕಷ್ಟು ದುಡಿದಿದ್ದರು.

ಶಿಲಾದೀಕ್ಷಿತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ, ದೆಹಲಿ ಸಿಎಂ ಅರವಿಂದ್‌ಕೇಜ್ರಿವಾಲ್, ಕೇಂದ್ರ ಮಂತ್ರಿ ನಿತಿನ್ ಗಡ್ಕರಿ ಸೇರಿದಂತೆ ವಿವಿಧ ಹಿರಿಯರು ಸಂತಾಪ ಸೂಚಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img