Monday, August 10, 2020
Home ಅಂತರ್ ರಾಜ್ಯ ಸುಶಾಂತ್‌ ಸಿಂಗ್ ಸಾವಿನ ತನಿಖೆ: ಮಹಾರಾಷ್ಟ್ರದಲ್ಲಿ ರಾಜಕೀಯ ನಾಯಕರ ವಾಕ್ಸಮರ

LATEST TRENDING

ಕಾರ್ಮಿಕ ಸಂಘಟನೆಗಳಿಂದ ‘ಭಾರತ ರಕ್ಷಿಸಿ’ ಹೋರಾಟ

ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾನೂನು ರದ್ದು ಮಾಡಿರುವ ಕೇಂದ್ರ ಸರ್ಕಾರ ಕೃಷಿ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳು...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು ವರದಿಯಾಗಿದೆ. ತನಗೆ ಕೋವಿಡ್ ದೃಢವಾದ ಬಗ್ಗೆ ಸ್ವತಃ ಪ್ರಣಬ್ ಮುಖರ್ಜಿ ಅವರು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಮ್...

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕೃಷಿ ಇಲಾಖೆಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಡಿಸಿ ಎಮ್ ಲಕ್ಷ್ಮಣ ಸವದಿಎಪಿ ಎಮ್ ಸಿ ಕಾಯ್ದೆಯ ತಿದ್ದುಪಡಿ ಯಾರಿಗೂ ಮಾರಕವಲ್ಲ...

ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನಲೆ ಶ್ರದ್ಧಾಂಜಲಿ

ಕಲಬುರಗಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನೆಲೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ...

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು...

ಸುಶಾಂತ್‌ ಸಿಂಗ್ ಸಾವಿನ ತನಿಖೆ: ಮಹಾರಾಷ್ಟ್ರದಲ್ಲಿ ರಾಜಕೀಯ ನಾಯಕರ ವಾಕ್ಸಮರ

ಮುಂಬೈ: ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ತನಿಖೆಯನ್ನು ಮಹಾರಾಷ್ಟ್ರ ಸರ್ಕಾರ ಸಿಬಿಐಗೆ ವಹಿಸಲು ಹಿಂಜರಿಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡಣವೀಸ್‌ ನೀಡಿರುವ ಹೇಳಿಕೆಯ ವಿರುದ್ಧ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹರಿಹಾಯ್ದಿದ್ದಾರೆ.

ಸುಶಾಂತ್‌ ಸಿಂಗ್‌ ಆತ್ಮಹತ್ಯೆಯ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರ ದಕ್ಷತೆ ಹಾಗೂ ಕಾರ್ಯಕ್ಷಮತೆಯನ್ನು ಅನುಮಾನಿಸುವುದು ಸರಿಯಲ್ಲ ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಕೊರೊನಾ ವಿರುದ್ಧದ ಹೋರಾಟದ ನಡುವೆಯೇ ಮುಂಬೈ ಪೊಲೀಸರು ಸುಶಾಂತ್‌ ತನಿಖೆಯನ್ನು ಪ್ರಾಮಾಣಿಕವಾಗಿ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

‘ಸುಶಾಂತ್‌ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂಬುದು ಬಹುತೇಕ ಸಾರ್ವಜನಿಕರ ಭಾವನೆಯಾಗಿದೆ. ಆದರೆ, ಮಹಾರಾಷ್ಟ್ರ ಸರ್ಕಾರ ಅದನ್ನು ಸಿಬಿಐಗೆ ವಹಿಸಲು ಹಿಂಜರಿಯುತ್ತಿದೆ’ ಎಂದು ದೇವೇಂದ್ರ ಫಡಣವೀಸ್‌ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉದ್ಧವ್‌ ಠಾಕ್ರೆ ‘ಪ್ರಕರಣದಲ್ಲಿ ರಾಜಕೀಯ ಬೆರೆಸುವುದು ಅತ್ಯಂತ ಶೋಚನೀಯ ವಿಷಯ’ ಎಂದಿದ್ದಾರೆ.

‘ಮುಂಬೈ ಪೊಲೀಸರು ಅಸಮರ್ಥರಾಗಿಲ್ಲ. ಯಾರಾದರೂ ಯಾವುದೇ ಪುರಾವೆ ಹೊಂದಿದ್ದರೆ ಅದನ್ನು ನಮ್ಮ ಬಳಿಗೆ ತರಬಹುದು. ನಾವು ತಪ್ಪಿತಸ್ಥರನ್ನು ವಿಚಾರಣೆಗೊಳಪಡಿಸಿ, ಶಿಕ್ಷಿಸುತ್ತೇವೆ. ಮಹಾರಾಷ್ಟ್ರ ಮತ್ತು ಬಿಹಾರದ ನಡುವೆ ಘರ್ಷಣೆ ಸೃಷ್ಟಿಸಲು ದಯವಿಟ್ಟು ಈ ಪ್ರಕರಣವನ್ನು ಬಳಸಿಕೊಳ್ಳಬೇಡಿ’ ಎಂದು ಉದ್ಧವ್‌ ತಿಳಿಸಿದ್ದಾರೆ.

‘ಮುಂಬೈ ಪೊಲೀಸರು ಈ ಪ್ರಕರಣದ ತನಿಖೆಯನ್ನು ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಸಿಬಿಐಗೆ ವಹಿಸುವ ಅಗತ್ಯವಿಲ್ಲ’ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಇತ್ತೀಚೆಗೆ ಹೇಳಿದ್ದರು.

ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 40 ಜನರ ವಿಚಾರಣೆ ನಡೆಸಲಾಗಿದೆ.

TRENDING