Sunday, August 9, 2020
Home ಅಂತರ್ ರಾಜ್ಯ ರಾಮಮಂದಿರ ಭೂಮಿಪೂಜೆ: ವಿಡಿಯೊ ಕಾನ್ಫರೆನ್ಸ್ ಮೂಲಕ ಅಡ್ವಾಣಿ, ಜೋಶಿ ಭಾಗಿ

LATEST TRENDING

ಕೊರೊನಾ ಸೋಂಕಿಗೊಳಗಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲಾಯಂ ಸಿಂಗ್‌ ಆರೋಗ್ಯದಲ್ಲಿ...

 ಲಕ್ನೋ: ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ (80) ಆರೋಗ್ಯ ಸ್ಥಿರವಾಗಿದೆ. ಮೂತ್ರಕೋಶ ಸಮಸ್ಯೆ ಕಾಣಿಸಿಕೊಂಡ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆಗಸ್ಟ್ 10ರಂದು...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ...

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ...

ರಾಮಮಂದಿರ ಭೂಮಿಪೂಜೆ: ವಿಡಿಯೊ ಕಾನ್ಫರೆನ್ಸ್ ಮೂಲಕ ಅಡ್ವಾಣಿ, ಜೋಶಿ ಭಾಗಿ

 ನವದೆಹಲಿ: ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರು ರಾಮ ಮಂದಿರ ನಿರ್ಮಾಣ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಅಯೋಧ್ಯೆಗೆ ಭೇಟಿ ನೀಡುವುದಿಲ್ಲ. ಬದಲಿಗೆ ಉಭಯ ನಾಯಕರು ಆಗಸ್ಟ್ 5 ರ ಕಾರ್ಯಕ್ರಮಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ದೇಗುಲ ನಿರ್ಮಾಣದ ಮೇಲ್ವಿಚಾರಣೆಗೆ ಸ್ಥಾಪಿಸಲಾಗಿರುವ ಟ್ರಸ್ಟ್‌ ಶನಿವಾರ ಉಭಯ ನಾಯಕರನ್ನು ದೂರವಾಣಿ ಕರೆ ಮೂಲಕ ಸಮಾರಂಭಕ್ಕೆ ಆಹ್ವಾನಿಸಿತ್ತು. ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಸ್ಥಾಪಿಸಲಾಗಿರುವ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮೂಲಕ ಇಬ್ಬರು ಹಿರಿಯ ಮುಖಂಡರಿಗೆ ಆಹ್ವಾನವನ್ನು ಕಳುಹಿಸಲಾಗುತ್ತಿದೆ.

ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮವು ಇದೇ ತಿಂಗಳ 5ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿಗದಿಯಾಗಿದೆ. ಸಮಾರಂಭಕ್ಕೆ ಭರ್ಜರಿ ಸಿದ್ಧತೆಗಳನ್ನು ಮಾಡಲಾಗಿದ್ದು, 40 ಕೆಜಿ ಬೆಳ್ಳಿ ಇಟ್ಟಿಗೆಯನ್ನು ಅಡಿಪಾಯದ ಕಲ್ಲಿನಂತೆ ಇಟ್ಟು ಶಿಲಾನ್ಯಾಸ ನೆರವೇರಿಸಲಾಗುತ್ತದೆ.

ಕೊರೊನಾ ವೈರಸ್‌ ಮತ್ತು ಪ್ರಯಾಣ ಮತ್ತು ಒಟ್ಟಿಗೆ ಸೇರುವ ಸಮಾರಂಭಗಳ ಮೇಲೆ ನಿರ್ಭಂದ ವಿರುವ ಕಾರಣಕ್ಕಾಗಿ ಸುಮಾರು 50 ವಿಐಪಿಗಳಿಗೆ ಮಾತ್ರ ಆಹ್ವಾನ ನೀಡಲು ತೀರ್ಮಾನಿಸಿರುವುದಾಗಿ ಟ್ರಸ್ಟ್ ಹೇಳಿದೆ.
ಕೇಂದ್ರದ ಮಾಜಿ ಸಚಿವೆ ಉಮಾಭಾರತಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಅವರಿಗೂ ಶನಿವಾರ ಆಹ್ವಾನ ಪತ್ರಿಕೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ. ಇವರು ಬಾಬರಿ ಮಸೀದಿ ಧ್ವಂಸ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.

ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ಸುರೇಶ್ ಭೈಯಾಜಿ ಜೋಶಿ ಸೇರಿ ವಿಎಚ್‌ಪಿ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿರುವುದಾಗಿ ದೇವಾಲಯದ ಟ್ರಸ್ಟಿ ತಿಳಿಸಿದ್ದಾರೆ.

TRENDING