Friday, September 25, 2020
Home ರಾಜ್ಯ ‘ಸರ್ಕಾರದ ನಿರ್ಲಕ್ಷ್ಯಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ': ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ಸರ್ಕಾರಿ ಗೌರವಗಳೊಂದಿಗೆ ಶಾಸಕ ನಾರಾಯಣ ರಾವ್ ಅಂತ್ಯಕ್ರಿಯೆ

ಬೀದರ್,ಸೆ.25- ನಿನ್ನೆ ನಿಧನರಾದ ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಅವರ ಅಂತ್ಯಕ್ರಿಯೆ ಇಂದು ಬಸವ ಕಲ್ಯಾಣದದ ಸಸ್ತಾಪುರ ಬಂಗ್ಲಾ ಸಮೀಪದ ಬೊಕ್ಕೆ ಲೇಔಟ್‍ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ನಟಿ ದೀಪಿಕಾರನ್ನು ರೋಲ್ ಮಾಡಲ್ ಆಗಿ ಅನುಸರಿಸಿರುವವರಿಗೆ...

 ಬಾಲಿವುಡ್ ಟಾಪ್ ನಟಿ ದೀಪಿಕಾ ಪಡುಕೋಣೆ ಹಾಗೂ ಅವರ ಮ್ಯಾನೇಜರ್ ಅವರಿಗೆ ಎನ್‍ಸಿಬಿ ಸಮನ್ಸ್ ನೀಡಿ ವಿಚಾರಣೆಗೆ ಆಹ್ವಾನಿಸಿದ ಹಿನ್ನೆಲೆ ಕನ್ನಡ ನಟಿ, ರಾಜಕಾರಣಿ ಮಾಳವಿಕಾ ಬೇಸರ ವ್ಯಕ್ತಪಡಿಸಿದ್ದಾರೆ.

ಅಂಬಾವಿಲಾಸ ಅರಮನೆ ರತ್ನಖಚಿತ ಸಿಂಹಾಸನ : ...

ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವದ ಅಂಗವಾಗಿ ಅಂಬಾವಿಲಾಸ ಅರಮನೆಯಲ್ಲಿ ಜೋಡಿಸಿರುವ ರತ್ನಖಚಿತ ಸಿಂಹಾಸನ ನೋಡಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ಪ್ರತಿವರ್ಷ ದಸರಾ ಆರಂಭಕ್ಕೆ ಕೆಲವೇ...

ಎಸ್.ಪಿ ಬಾಲಸುಬ್ರಹ್ಮಣ್ಯಂ ಪರಿಚಯವೇ ನನ್ನ ಜೀವನಕ್ಕೆ ದೊಡ್ಡ...

ಧಾರವಾಡ: ಸಂಗೀತ ಸ್ವರ ಲೋಕದ ಮಾಂತ್ರಿತ, ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಎಸ್​ಪಿಬಿ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿ ಪಳಗಿದ ಗಾಯಕಿ ಸಂಗೀತಾ ಕಟ್ಟಿ, ಗಾನ ಗಾರುಡಿಗನ ಬಗ್ಗೆ...

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರೈತರ ಪ್ರತಿಭಟನೆ

ಮೈಸೂರು: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಮೈಸೂರು- ಬೆಂಗಳೂರು ಹೆದ್ದಾರಿಯನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ತಡೆದು ಪ್ರತಿಭಟನೆ ನಡೆಸಿದರು.

‘ಸರ್ಕಾರದ ನಿರ್ಲಕ್ಷ್ಯಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ’: ಸಿದ್ದರಾಮಯ್ಯ

ಬೆಂಗಳೂರು: ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ.

ಇಂದು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಆಸ್ಪತ್ರೆಯಲ್ಲಿರುವ ಸಿಎಂ ಬಿಎಸ್​ವೈ ಅವರು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು ಎಂದಿದ್ದಾರೆ.

ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ.‌ ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ರಾಜ್ಯ ಸರ್ಕಾರದ ಈ ನಿರ್ಲಕ್ಷ್ಯಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಆರೋಪಿಸಿದರು.

ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್‌ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ‌ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ ಸಿಎಂ ಬಿಎಸ್​ವೈ ಅವರು ಗಮನ ಹರಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದಾರೆ.

TRENDING