Tuesday, September 22, 2020
Home ಜಿಲ್ಲೆ ಹಾವೇರಿ ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಬಸವರಾಜ ಬೊಮ್ಮಾಯಿ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಹಾವೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ವ್ಯಾಪಕ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಹಾಗೂ ಬೆಳೆಹಾನಿ ಪ್ರಾಥಮಿಕ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿಗೆ ತಕ್ಷಣವೇ ರೂ.10 ಸಾವಿರ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಹಾನಗಲ್ ತಾಲೂಕು ಕೂಡಲ ಹಾಗೂ ಸವಣೂರ ತಾಲೂಕು ಕುಣಿಮೆಳ್ಳಿಹಳ್ಳಿ ಗ್ರಾಮಗಳ ಮಳೆ ಹಾಗೂ ಪ್ರವಾಹದಿಂದ ಸಂಭವಿಸಿದ ಹಾನಿಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಆಗಸ್ಟ್ ತಿಂಗಳು ವಾಡಿಕೆ ಮಳೆಗಿಂತ ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಗಾಳಿ ಕೂಡ ಹೆಚ್ಚಾಗಿ ಬೀಸುತ್ತಿದೆ. ಕರಾವಳಿಯಲ್ಲಿ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಉಂಟಾಗಿದೆ ಎಂದರು. 

ರಭಸದಿಂದ ತುಂಬಿ ಹರಿಯುವ ಹಳ್ಳ- ಕೊಳ್ಳಗಳನ್ನು ದಾಟದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ ಹುಬ್ಬಳ್ಳಿ ಜಿಲ್ಲಾಧಿಕಾರಿ

ಶಿಗ್ಗಾಂವ, ಸವಣೂರ ಹಾಗೂ ಹಾನಗಲ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮನೆಗಳು ಭಾಗಶಃ ಹಾಗೂ ಪೂರ್ಣ ಪ್ರಮಾಣದಲ್ಲಿ ಬಿದ್ದಿವೆ. ಗೋವಿನ ಜೋಳದ ಬೆಳೆ ನೆಲಕ್ಕುರುಳಿದೆ. ಬೆಳೆಹಾನಿಯ ಪ್ರಾಥಮಿಕ ಸರ್ವೇಗೆ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕಳೆದ ಬಾರಿ ಅನುಭವದಿಂದ ನದಿಪಾತ್ರದ ಗ್ರಾಮಗಳಾದ ಕೂಡಲ, ನಾಗನೂರು, ಕುಣಿಮೆಳ್ಳಿಹಳ್ಳಿ, ತೆವರಮೆಳ್ಳಿಹಳ್ಳಿ, ಹಲಸೂರ, ಮೆಳ್ಳಾಗಟ್ಟಿ ಇತರೆ ಗ್ರಾಮಗಳ ಜನರ ರಕ್ಷಣೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಪೂರಕ ವ್ಯವಸ್ಥೆಗೆ ಸೂಚಿಸಲಾಗಿದೆ ಎಂದರು.
ಕಳೆದ ಭಾರಿ ಕೂಡಲ ಮಠದಲ್ಲಿ ನೀರು ನುಗ್ಗಿತ್ತು. ಹಾಗಾಗಿ ಸಾರ್ವಜನಿಕರ ರಕ್ಷಣೆಗೆ ಪೂರ್ವಭಾವಿ ವ್ಯವಸ್ಥೆ ಕೈಗೊಳ್ಳಲಾಗುವುದು ಹಾಗೂ ಇಲ್ಲಿಗೆ ಒಂದು ಎಸ್.ಡಿ.ಆರ್.ಎಫ್. ತಂಡ ಕಳುಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.  

TRENDING