Friday, October 23, 2020
Home ಜಿಲ್ಲೆ ಹಾಸನ ಹಾಸನ | ಜಿಲ್ಲೆಯಲ್ಲಿ ಹೊಸದಾಗಿ 126 ಕೋವಿಡ್ ಪ್ರಕರಣ ಪತ್ತೆ, ಆರು ಮಂದಿ ಸಾವು,

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಹಾಸನ | ಜಿಲ್ಲೆಯಲ್ಲಿ ಹೊಸದಾಗಿ 126 ಕೋವಿಡ್ ಪ್ರಕರಣ ಪತ್ತೆ, ಆರು ಮಂದಿ ಸಾವು,

 ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 126 ಕೋವಿಡ್ ಪ್ರಕರಣ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3585 ಕ್ಕೆ ಏರಿದೆ.

ಸೋಮವಾರ 100 ಜನ ಸೇರಿದಂತೆ ಈವರೆಗೆ 1416 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2062 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ 41 ಜನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನಿಂದ ಆರು ಜನ ಅಸುನೀಗಿದ್ದು, ಇದರೊಂದಿಗೆ ಮೃತರ ಸಂಖ್ಯೆ 107 ತಲುಪಿದೆ.

ಶೀತ, ಜ್ವರ ಮಾದರಿ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅರಸೀಕೆರೆ ತಾಲ್ಲೂಕಿನ 61 ವರ್ಷ, 65 ವರ್ಷದ ಪುರುಷರು ಹಾಗೂ 45 ವರ್ಷದ ಮಹಿಳೆ ಹಿಮ್ಸ್‌ನಲ್ಲಿ ದಾಖಲಾಗಿದ್ದರು. ಹೊಳೆನರಸೀಪುರದ 67 ವರ್ಷ, ಹಾಸನ ತಾಲ್ಲೂಕಿನ 46 ವರ್ಷದ ಪುರುಷ ಹಾಗೂ ಅರಕಲಗೂಡು ತಾಲ್ಲೂಕಿನ 45 ವರ್ಷದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಹೊಸದಾಗಿ ಅರಸೀಕೆರೆ 14, ಚನ್ನರಾಯಪಟ್ಟಣ 11, ಆಲೂರು 4, ಹಾಸನ 61, ಹೊಳೆನರಸೀಪುರ 23,
ಅರಕಲಗೂಡು 5, ಬೇಲೂರು 6, ಸಕಲೇಶಪುರ ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ತಿಳಿಸಿದರು.

ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ, ಶೀತ ಜ್ವರ ಮಾದರಿ ಅನಾರೋಗ್ಯ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ಕೋವಿಡ್‌ ದೃಢಪಟ್ಟಿದೆ. ಕೆಲ ಪ್ರಕರಣಗಳಲ್ಲಿ ಸೋಂಕಿನ ಮೂಲ ಪತ್ತೆ ಮಾಡಲಾಗುತ್ತಿದೆ. ಶೀತ, ಜ್ವರ, ಕೆಮ್ಮು, ಗಂಟಲು ನೋವು ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರು ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿ ಹಾಗೂ ಸಹಾಯವಾಣಿಗೆ ಕರೆ ಮಾಡಿ ಸಲಹೆ ಪಡೆದುಕೊಳ್ಳಬಹುದು ಎಂದು ಹೇಳಿದರು.

TRENDING