Monday, September 21, 2020
Home ರಾಜ್ಯ ಇಂದು SSLC ಫಲಿತಾಂಶ: ವಿದ್ಯಾರ್ಥಿಗಳು, ಪೋಷಕರಿಗೆ ಆತ್ಮಸ್ಥೈರ್ಯ ತುಂಬಿದ ಸಚಿವ ಎಸ್. ಸುರೇಶ್ ಕುಮಾರ್

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಇಂದು SSLC ಫಲಿತಾಂಶ: ವಿದ್ಯಾರ್ಥಿಗಳು, ಪೋಷಕರಿಗೆ ಆತ್ಮಸ್ಥೈರ್ಯ ತುಂಬಿದ ಸಚಿವ ಎಸ್. ಸುರೇಶ್ ಕುಮಾರ್

ಬೆಂಗಳೂರು(.10): 2019-20ನೇ ಸಾಲಿನ ಎಸ್ಎಸ್ಎಲ್​​ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಹಾಗಾಗಿ ಎಸ್ಎಸ್ಎಲ್​​ಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಆತ್ಮಸ್ಥೈರ್ಯ ತುಂಬಿದ್ದಾರೆ.

ವಿದ್ಯಾರ್ಥಿಗಳ ಪೋಷಕರಿಗೆ ತಮ್ಮ ಫೇಸ್​​ಬುಕ್​​​ ಖಾತೆ ಮೂಲಕ ಆತ್ಮಸ್ಥೈರ್ಯ ತುಂಬಿರುವ ಸಚಿವ ಸುರೇಶ್​​ ಕುಮಾರ್​​, ಇಂದು ದಿನಾಂಕ 10-08-2020 ಮಧ್ಯಾಹ್ನ 3.30ರ ಹೊತ್ತಿಗೆ ಎಸ್​ಎಸ್​ಎಲ್​​ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುತ್ತದೆ. ತಮ್ಮ ಮೊಬೈಲಿಗೆ ಫಲಿತಾಂಶ ಬರುವುದರಿಂದ ಕೊರೋನಾ ವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ ಎಂಬುದು ತಮಗೆ ತಿಳಿದಿರಲಿ ಎಂದಿದ್ದಾರೆ. ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ, ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ. ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿ ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ ಸುರೇಶ್​​ ಕುಮಾರ್​​.

ಫಲಿತಾಂಶ ಬಂದ ಬಳಿಕ ವಿದ್ಯಾರ್ಥಿಗಳನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಿ ನೋವಾಗುವಂತೆ ಮಾಡಬೇಡಿ. ಅವರು ಯಾವ ಕೋರ್ಸನ್ನು ಆಯ್ಕೆ ಮಾಡಿದ್ದರೂ ಆ ಕೋರ್ಸಿಗೆ ಸೇರಿಸಿ ಮುಂದೆ ಚೆನ್ನಾಗಿ ಓದಲು ಹೇಳಿ. ಒಂದು ವೇಳೆ ಅವರ ನಿರೀಕ್ಷೆಗಿಂತ ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಬಂದಲ್ಲಿ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.

ಮಗು ಮನೆಯ ಬೆಳಕು ಆ ಬೆಳಕು ಸದಾ ಪ್ರಜ್ವಲಿಸಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ಎಸ್​ ಸುರೇಶ್​ ಕುಮಾರ್​​​​ ಶುಭಾಶಯ ಕೋರಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಎಸ್‌ಎಸ್‌ಎಲ್​​ಸಿ ಪರೀಕ್ಷಾ ಫಲಿತಾಂತ ಪ್ರಕಟಗೊಳ್ಳಲಿದೆ. ಈ ಬಾರಿ ವಿದ್ಯಾರ್ಥಿಗಳ ಮೊಬೈಲ್​ಗೆ ಎಸ್​​ಎಂಎಸ್​​​​ ಮೂಲಕ ಫಲಿತಾಂಶ ಬರಲಿದೆ. ಜತೆಗೆ ವೆಬ್​ಸೈಟ್​ನಲ್ಲೂ ಫಲಿತಾಂಶ ಪ್ರಕಟವಾಗಲಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುಂಪು ಗೂಡಬಾರದು ಎಂಬ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಮೊಬೈಲ್ ಗೆ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.  

TRENDING