Wednesday, January 27, 2021
Home ಜಿಲ್ಲೆ ಆಗಸ್ಟ್ 14ರವರೆಗೂ ಭಾರೀ ಮಳೆ

ಇದೀಗ ಬಂದ ಸುದ್ದಿ

ಆಗಸ್ಟ್ 14ರವರೆಗೂ ಭಾರೀ ಮಳೆ

ಈಗಾಗಲೇ ವರುಣನ ಅಟ್ಟಹಾಸಕ್ಕೆ ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜನರು ತತ್ತರಿಸಿ ಹೋಗಿದ್ದು, ಇದರ ನಡುವೆ ಆ.14ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಕೆಲವು ದಿನ ಮಳೆಯ ಆರ್ಭಟ ಹೆಚ್ಚಾಗಲಿದೆ.

ರಾಜ್ಯ ಕರಾವಳಿ, ದಕ್ಷಿಣ ಒಳನಾಡು, ಹಾಗೂ ಉತ್ತರ ಒಳನಾಡಿನಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ದಿ ನ್ಯೂಸ್ ೨೪ ಕನ್ನಡ

TRENDING